ಬೆಂಗಳೂರು: ಮಧ್ಯಂತರ ಪರಿಹಾರ ಹಾಗೂ ಹಳೆಯ ಪಿಂಚಣಿ ಪದ್ಧತಿ ಮರು ಜಾರಿ ಕುರಿತು ಅಧ್ಯಯನಕ್ಕೆ ಉನ್ನತ ಮಟ್ಟದ ಸಮಿತಿ ನೇಮಿಸಲು ಸರ್ಕಾರ ಆದೇಶ ಹೊರಡಿಸಿರುವುದರಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ ಅಂತ್ಯಗೊಳಿಸಿದ್ದಾರೆ.

ಹಣಕಾಸು ಇಲಾಖೆ ಆದೇಶ ಹೊರಡಿಸಿದ ಬಳಿಕ ಸಂಘದ ಪದಾಧಿಕಾರಿಗಳು ಮತ್ತು ನೌಕರರ ವಿವಿಧ ಸಂಘಟನೆಗಳ ಪ್ರಮುಖರ ಜತೆ ಸಭೆ ನಡೆಸಿದ ಬಳಿಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮುಷ್ಕರ ಅಂತ್ಯಗೊಳಿಸುವ ಘೋಷಣೆ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಮಧ್ಯಂತರ ಪರಿಹಾರವಾಗಿ ಶೇಕಡ 17ರಷ್ಟು ವೇತನ ಹೆಚ್ಚಳ ಮತ್ತು ಎನ್ಪಿಎಸ್ ಮರು ಜಾರಿ ಕುರಿತು ಅಧ್ಯಯನಕ್ಕೆ ಸಮಿತಿ ನೇಮಿಸುವ ತೀರ್ಮಾನವನ್ನು ಒಪ್ಪಿಕೊಂಡು ಮುಷ್ಕರ ಅಂತ್ಯಗೊಳಿಸುತ್ತಿದ್ದೇವೆ' ಎಂದರು.

ಶೇಕಡ 40ರಷ್ಟು ವೇತನ ಹೆಚ್ಚಳ ಸೇರಿದಂತೆ ಎಲ್ಲ ಬೇಡಿಕೆಗಳು ಈಡೇರಬೇಕು. ಈಗ ತಾತ್ಕಾಲಿಕವಾಗಿ ಮುಷ್ಕರ ಸ್ಥಗಿತವಾಗಲಿದೆ. ಮುಂದಿನ ದಿನಗಳಲ್ಲಿ ಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ ಆರಂಬಿಸಲಾಗುವುದು ಎಂದು ಹೇಳಿದರು.

ಇದನ್ನು ಓದಿ.. ರಾಜ್ಯ ಸರ್ಕಾರಿ ನೌಕರರ ವೇತನ ಶೇ 17ರಷ್ಟು ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.