ಬೆಂಗಳೂರು: ಮುಡಾ ಪ್ರಕರಣದಲ್ಲಿ ತಮ್ಮ ಹಾಗೂ ಕುಟುಂಬದ ಭ್ರಷ್ಟಾಚಾರ ಬಯಲು ಮಾಡಿ ನ್ಯಾಯಾಲಯದಲ್ಲಿ ಹೋರಾಡುತ್ತಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಹಣಿಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಿಂಬಾಲಕರನ್ನು ಬಿಟ್ಟು ಸುಳ್ಳು ದೂರುಗಳನ್ನು ಕೊಡಿಸಿ ಬೆದರಿಕೆಯೊಡ್ಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿರುವ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಪೊಲೀಸ್ ಬಲ ಪ್ರಯೋಗಿಸಿ ಇಂತಹ ಆಧಾರ ರಹಿತ ದೂರುಗಳನ್ನು ದಾಖಲಿಸಿಕೊಂಡು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಂವಿಧಾನಾತ್ಮಕ ದಾರಿಯಲ್ಲಿ ಹೋರಾಡುತ್ತಿರುವ ಕಾರ್ಯಕರ್ತರೊಬ್ಬರನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ಹತಾಶೆಯ ಎಲ್ಲೆ ಮೀರಿದ ದೌರ್ಜನ್ಯವನ್ನು ಪ್ರತಿಬಿಂಬಿಸುತ್ತದೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ತೋಳ್ಬಲ ಹಾಗೂ ಅಧಿಕಾರ ಬಲವನ್ನು ಪ್ರಯೋಗಿಸಿ ಒಬ್ಬ ಜನಪರ ಕಾಳಜಿಯ ಸಾಮಾನ್ಯ ಪ್ರಜೆಯ ಹೋರಾಟದ ಹಕ್ಕನ್ನು ದಮನ ಮಾಡುವ ನೀಚ ಬೆಳವಣಿಗೆ ಇದಾಗಿದೆ. ಬಿಜೆಪಿ ಇದನ್ನು ಉಗ್ರವಾಗಿ ಖಂಡಿಸುತ್ತದೆ. ಸುಳ್ಳು ದೂರು, ಬೆದರಿಕೆಗಳು ಮುಂದುವರೆದಲ್ಲಿ ಸ್ನೇಹಮಯಿ ಕೃಷ್ಣ ಅವರ ರಕ್ಷಣೆಗೆ ಬಿಜೆಪಿ ನಿಲ್ಲುತ್ತದೆ’ ಎಂದು ತಿಳಿಸಿದ್ದಾರೆ.
.ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್ನಿಂದ ಮತ್ತೊಂದು ದೂರು.ಮೈಸೂರು: ಸ್ನೇಹಮಯಿ ಕೃಷ್ಣ ವಿರುದ್ಧ ದೂರು .ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ಆರೋಪ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್ಐಆರ್.MUDA Scam | ಮುಖ್ಯಮಂತ್ರಿ ವಿಚಾರಣೆ ಸ್ವಾಗತಾರ್ಹ: ದೂರುದಾರ ಸ್ನೇಹಮಯಿ ಕೃಷ್ಣ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.