ಬೆಂಗಳೂರು: ಕೊರೊನಾ ವೈರಸ್ ಸೋಂಕು ಹರಡುವುದನ್ನು ತಡೆಯಲು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿರುವವರಿಗೆ ಭಾರಿ ದಂಡ ವಿಧಿಸುವುದಾಗಿ ಆದೇಶ ಹೊರಡಿಸಿದ್ದ ಸರ್ಕಾರ ಇದೀಗ ದಂಡದ ಪ್ರಮಾಣವನ್ನು ಇಳಿಸಿದೆ.

ಮಾಸ್ಕ್ ಧರಿಸದವರಿಗೆ ವಿಧಿಸಿದ್ದ ದಂಡ ಪ್ರಮಾಣವನ್ನು ಒಂದು ಸಾವಿರದಿಂದ ₹ 250ಕ್ಕೆ ಕಡಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ನಗರ ಪ್ರದೇಶಗಳಲ್ಲಿ ₹ 250 ಹಾಗೂ ಗ್ರಾಮೀಣ ಭಾಗದಲ್ಲಿ ₹ 100 ದಂಡ ವಿಧಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ಆದೇಶದಲ್ಲಿ ಸರ್ಕಾರವು ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ಮತ್ತು ಗ್ರಾಮೀಣ ಪ್ರದೇಶದಲ್ಲಿ 500 ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗಿತ್ತು. ಆದರೆ ಸಾರ್ವಜನಿಕರ ವಿರೋಧ ಮತ್ತು ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ದಂಡದ ಪ್ರಮಾಣವನ್ನು ನಗರ ಪ್ರದೇಶದಲ್ಲಿ 250 ಮತ್ತು ಗ್ರಾಮೀಣ ಪ್ರದೇಶದಲ್ಲಿ 100ಕ್ಕೆ ಇಳಿಸಲು ತೀರ್ಮಾನಿಸಲಾಗಿದೆ. ಇದು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.