ಬೆಳಗಾವಿ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡಲಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ ಎಂದರು.

‘ಕಳೆದ 75 ವರ್ಷಗಳಲ್ಲಿ ಎಂದೂ ಕಂಡರಿಯದ ಪ್ರಕರಣ ಇದಾಗಿದ್ದು, ನೂರಾರು ಸಂಖ್ಯೆಯಲ್ಲಿರುವ ಅತ್ಯಾಚಾರ ಸಂತ್ರಸ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರ್ಥಿಕ ನೆರವು ಘೋಷಿಸಿದ್ದಾರೆ’ ಎಂದು ತಿಳಿಸಿದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ ಸುರ್ಜೇವಾಲಾ, ‘ಪ್ರಜ್ವಲ್ ಕೃತ್ಯಗಳ ಬಗ್ಗೆ ಮಾಹಿತಿ ಇದ್ದರೂ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಏಕೆ’ ಎಂದು ಪ್ರಶ್ನಿಸಿದರು.

‘ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ಅವರ ರಾಜತಾಂತ್ರಿಕ ಪಾಸ್ಪೋರ್ಟ್ ಅನ್ನು ಏಕೆ ರದ್ದುಗೊಳಿಸಲಿಲ್ಲ? ಅವರನ್ನು ಮರಳಿ ಕರೆತರಲು ಇಂಟರ್ಪೋಲ್ ಮೂಲಕ ಬ್ಲೂ ಕಾರ್ನರ್ ನೋಟಿಸ್ ನೀಡಲಿಲ್ಲ ಯಾಕೆ?’ ಎಂದು ಕೇಳಿದರು.

ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣ ಪತ್ತೆಗೆ ಸಿಬಿಐ ಮೂಲಕ ಬ್ಲೂ ಕಾಲರ್ ನೋಟಿಸ್ ಹೊರಡಿಸಲು ಮುಂದಾಗಿರುವುದಾಗಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.