ಬೆಂಗಳೂರು: ಭಾರತ್ ಜೋಡೊ ಯಾತ್ರೆಯಲ್ಲಿ ಕೆಜಿಎಫ್-2 ಚಿತ್ರದ ಹಾಡಿನ ಸಂಗೀತ ಬಳಸಿಕೊಂಡು ಹಕ್ಕುಸ್ವಾಮ್ಯ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಪ್ರಕರಣ ರದ್ದು ಕೋರಿ ರಾಹುಲ್ ಗಾಂಧಿ, ಕಾಂಗ್ರೆಸ್ ಸಂವಹನ ಮತ್ತು ಪ್ರಚಾರ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹಾಗೂ ಸಾಮಾಜಿಕ ಮತ್ತು ಡಿಜಿಟಲ್ ಮಾಧ್ಯಮ ಮುಖ್ಯಸ್ಥೆ ಸುಪ್ರಿಯಾ ಶ್ರೀನೇತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಇಂದು (ಬುಧವಾರ) ವಿಚಾರಣೆ ನಡೆಸಿತು.

ಈ ಪ್ರಕರಣ ಸಂಬಂಧ ಜೂನ್ 23ರಂದು (ಶುಕ್ರವಾರ) ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತೀರ್ಪನ್ನು ಕಾಯ್ದಿರಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.