ಬೆಂಗಳೂರು: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಣ ದುರ್ಬಳಕೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ವಹಿಸಬೇಕು’ ಎಂದು ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಅರ್ಜಿಯ ಸಿಂಧುತ್ವಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.

‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯದ ವಿವಾದ ಎಂಬುದಕ್ಕೆ ಸಂಬಂಧಿಸಿದಂತೆ ಇದನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸಬೇಕೆ? ಮತ್ತು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ–1949 ಕಲಂ 35ಎ ಅಡಿ ಹೊರಡಿಸಿರುವ ಮಾಸ್ಟರ್ ಸುತ್ತೋಲೆಯ ಪ್ರಕಾರ ನಿರ್ದಿಷ್ಟ ಮೊತ್ತದ ಹಣಕಾಸು ಅವ್ಯವಹಾರವನ್ನು ಸಿಬಿಐ ತನಿಖೆ ನಡೆಸಬೇಕೇ? ಎಂಬುದರ ಸಿಂಧುತ್ವವನ್ನು ನಿಷ್ಕರ್ಷಿಸಿರುವ ನ್ಯಾಯಪೀಠ, ‘ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವುದಕ್ಕೆ ಸಂಬಂಧಿಸಿದಂತೆ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ–1949ರ ಕಲಂ 35ಎ ಅಡಿಯಲ್ಲಿನ ವ್ಯಾಖ್ಯಾನವನ್ನು ಒಪ್ಪಲಾಗದು’ ಎಂದು ಹೇಳಿದೆ.

‘ಒಂದು ವೇಳೆ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕೋರಿಕೆಗೆ ಅನುಮತಿ ನೀಡಿದರೆ ಭವಿಷ್ಯದಲ್ಲಿ ಪ್ರತಿಯೊಂದು ಬ್ಯಾಂಕಿಂಗ್ ಸಂಸ್ಥೆಯೂ ಸಿಬಿಐ ತನಿಖೆಗೆ ಕೋರಬಹುದು. ಇದಕ್ಕೆಲ್ಲಾ ಸಮ್ಮತಿಸುತ್ತಾ ಹೋದರೆ ದೆಹಲಿ ಪೊಲೀಸ್ ವಿಶೇಷ ಕಾಯ್ದೆ ಅನುಪಯುಕ್ತವಾಗಲಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ರಾಜ್ಯ ಸರ್ಕಾರದ ಪರ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಪರ ರವಿವರ್ಮ ಕುಮಾರ್ ಮತ್ತು ಯೂನಿಯನ್ ಬ್ಯಾಂಕ್ ಪರ ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಹಾಗೂ ಸಿಬಿಐ ಪರ ಪಿ.ಪ್ರಸನ್ನ ಕುಮಾರ್ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.