ಬೆಳಗಾವಿ: ‘ಬೆಳಗಾವಿ, ಮೈಸೂರು ಸೇರಿದಂತೆ ವಿವಿಧ ಕಡೆಗಳ ಫಲಿತಾಂಶದ ಬಗ್ಗೆ ಪಕ್ಷ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಯಾರ ವಿರುದ್ಧವೂ ಅವಸರದ ಕ್ರಮ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಾರಣಾಸಿಯಿಂದ ಮಂಗಳವಾರ ಸಂಜೆ ಮರಳಿದ ಅವರು ಇಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು.

ಬೆಳಗಾವಿಯಲ್ಲಿ 13 ಶಾಸಕರಿದ್ದರೂ ಬಿಜೆಪಿಅಭ್ಯರ್ಥಿ ಸೋತ ಬಗ್ಗೆ ಕೇಳಿದ ಪ್ರಶ್ನೆಗೆ, ‘ನಮ್ಮ ಮತಗಳಲ್ಲಿ ಸ್ವಲ್ಪ ಹೆಚ್ಚು ಕಡಿಮೆ ಆಗಿದೆ. ಈ ಬಗ್ಗೆ ಕೂಡಾ ಪಕ್ಷದ ಸಭೆಯಲ್ಲಿ ಕೂಲಂಕಶವಾಗಿ ಚರ್ಚೆ ನಡೆಸುತ್ತೇವೆ’ ಎಂದರು.

ಇದನ್ನೂ ಓದಿ:ಫಲಿತಾಂಶ | ಪಕ್ಷಗಳ ಬಲಾಬಲ: ಬಿಜೆಪಿ–11, ಕಾಂಗ್ರೆಸ್–11, ಜೆಡಿಎಸ್–02, ಇತರೆ–01

ರಮೇಶ ಜಾರಕಿಹೊಳಿ ಮೇಲೆ ಕ್ರಮ ತೆಗೆದುಕೊಳ್ಳುತ್ತೀರಾ ಎಂದು ಕೇಳಿದ ಪ್ರಶ್ನೆಗೆ, ‘ಈಗಷ್ಟೆ ವಾರಣಾಸಿಯಿಂದ ಮರಳಿದ್ದೇನೆ. ಈ ಬಗ್ಗೆ ಪಕ್ಷದಲ್ಲಿ ಚರ್ಚೆ ಮಾಡುತ್ತೇವೆ. ಹಾಗೆಂದು ಯಾರ ವಿರುದ್ಧವೂ ಅವಸರದ ಕ್ರಮ ಇಲ್ಲ. ಪಕ್ಷದ ವರಿಷ್ಠರಿದ್ದಾರೆ. ಅವರು ನೋಡಿಕೊಳ್ಳುತ್ತಾರೆ’ ಎಂದರು.

‘ಚುನಾವಣೆ ನಡೆದ ಕ್ಷೇತ್ರಗಳಲ್ಲಿ ಕಳೆದ ಬಾರಿ 6 ಕ್ಷೇತ್ರಗಳನ್ನು ಗೆದ್ದಿದ್ದೆವು. ಈ ಬಾರಿ 5 ಕ್ಷೇತ್ರಗಳನ್ನು ಹೆಚ್ಚುವರಿಯಾಗಿ ಗೆದ್ದಿದ್ದೇವೆ. ಹೆಚ್ಚು ಗೆದ್ದಿರುವುದು ತೃಪ್ತಿ ತರಲೇಬೇಕಲ್ಲವೇ? ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ಹೆಚ್ಚಿಸಿಕೊಂಡಿರುವುದರ ಸಂಕೇತವಿದು.’ ಎಂದರು.

ಇದನ್ನೂ ಓದಿ:ವಿಧಾನ ಪರಿಷತ್: ಬಲ ವರ್ಧಿಸಿಕೊಂಡ ಬಿಜೆಪಿ; ಬೀಗಿದ ಕಾಂಗ್ರೆಸ್, ಕುಗ್ಗಿದ ಜೆಡಿಎಸ್

‘ಬಿಜೆಪಿ ಧಮ್ ಇಲ್ಲದ ಪಕ್ಷ’ ಎಂದು ಸಿದ್ದರಾರಾಯ್ಯ ಟೀಕಿಸಿದ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಅವರ ಧಮ್ ಎಷ್ಟಿದೆ ಎನ್ನುವುದು ಗೊತ್ತು. ಅವರ ಕ್ಷೇತ್ರವನ್ನೇ ಉಳಿಸಿಕೊಳ್ಳಲು ಅವರಿಗೆ ಸಾಧ್ಯ ಆಗಿಲ್ಲ. ಅವರ ನೇತೃತ್ವದಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರವನ್ನೇ ಕಳೆದುಕೊಂಡಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.