ಬೆಂಗಳೂರು: ಕರ್ನಾಟಕ ನಾಟಕ ಅಕಾಡೆಮಿಯು ಶಿವಮೊಗ್ಗದ ಕುಪ್ಪಳ್ಳಿಯಲ್ಲಿರುವ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಲ್ಲಿ ಅಕ್ಟೋಬರ್ 3ರಿಂದ 7ರವರೆಗೆ ರಾಜ್ಯಮಟ್ಟದ ನಾಟಕ ರಚನಾ ಶಿಬಿರ ಆಯೋಜಿಸಿದೆ.

ಈಗಾಗಲೇ ಸಾಹಿತ್ಯ ಮತ್ತು ರಂಗಭೂಮಿ ಕ್ಷೇತ್ರದಲ್ಲಿ ಹೆಸರು ಮಾಡಿರುವ, 18 ರಿಂದ 40 ವರ್ಷದೊಳಗಿನ 20 ಬರಹಗಾರರಿಗೆ ಈ ಶಿಬಿರದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ನಾಡಿನ ಪ್ರಮುಖ ನಾಟಕಕಾರರು ಹಾಗೂ ಕಲಾವಿದರು ಶಿಬಿರದಲ್ಲಿ ಭಾಗವಹಿಸಿ, ಮಾರ್ಗದರ್ಶನ ನೀಡಲಿದ್ದಾರೆ ಎಂದು ಅಕಾಡೆಮಿ ಅಧ್ಯಕ್ಷ ಕೆ.ವಿ. ನಾಗರಾಜಮೂರ್ತಿ ತಿಳಿಸಿದ್ದಾರೆ.

ಆಸಕ್ತರು ಇದೇ 17ರೊಳಗೆ ಅರ್ಜಿಯನ್ನು ನಿರ್ಮಲಾ ಮಠಪತಿ, ರಿಜಿಸ್ಟ್ರಾರ್, ಕರ್ನಾಟಕ ನಾಟಕ ಅಕಾಡೆಮಿ, ಕನ್ನಡ ಭವನ, ನೆಲಮಹಡಿ, ಚಾಲುಕ್ಯ ವಿಭಾಗ, ಜೆ.ಸಿ. ರಸ್ತೆ, ಬೆಂಗಳೂರು–560 002 ಈ ವಿಳಾಸಕ್ಕೆ ಕಳುಹಿಸಬೇಕು. ಮೊದಲು ಅರ್ಜಿ ಕಳಿಸಿದವರಿಗೆ ಆದ್ಯತೆ ನೀಡಲಾಗುವುದು. ಶಿಬಿರಾರ್ಥಿಗಳ ನೋಂದಣಿ ಮತ್ತು ಪ್ರವೇಶ ಉಚಿತವಾಗಿರಲಿದೆ ಎಂದು ಹೇಳಿದ್ದಾರೆ.

ಸಂಪರ್ಕಕ್ಕೆ ದೂರವಾಣಿ ಸಂಖ್ಯೆ: 080 22244176 ಅಥವಾ 22237484

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.