ಒಬ್ಬ ಮುಖ್ಯಮಂತ್ರಿಯಾಗಿ ಘನತೆಯ ಸ್ಥಾನದಲ್ಲಿ ಕುಳಿತಿರುವ ನೀವು ಅಸಂಬದ್ಧವಾಗಿ ಪ್ರತಿಕ್ರಿಯಿಸಿರುವುದನ್ನು ನೋಡಿದರೆ ಹಗರಣಗಳ ಸುಳಿಯಲ್ಲಿ ಸಿಲುಕಿಕೊಂಡು ಕಾನೂನಿನ ಕುಣಿಕೆಯ ಆತಂಕ ಎದುರಿಸುತ್ತಿರುವ ಪರಿಸ್ಥಿತಿಯಿಂದ ಹತಾಶೆಯ ಅಂಚಿಗೆ ತಲುಪಿರುವುದು ವೇದ್ಯವಾಗುತ್ತಿದೆ.
ನಾನು ಎತ್ತಿರುವ ಪ್ರಶ್ನೆಗಳಿಗೆ ನೀವು ಬಹಿರಂಗ ಚರ್ಚೆಗೆ ಬರಲು…
ಆದರೆ ನಿಮಗೆ ಸುತ್ತಿಕೊಂಡಿರುವ ಮುಡಾ ಹಗರಣದ ಉರುಳಿನಿಂದ ಹಿಡಿದು,ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಕಳಂಕಗಳನ್ನು ಹೊತ್ತ ನೀವು ರಾಜಕೀಯ ಜೀವನದಲ್ಲಿ ಮುಂದೆಂದೂ ಕಳಂಕ ರಹಿತರಾಗಿ ಹೊರಬರಲು ಸಾಧ್ಯವೇ ಇಲ್ಲ ಎನ್ನುವುದನ್ನು ಸದ್ಯದ ತನಿಖೆಗಳು ಹಾಗೂ ಹೊರ ಬಂದಿರುವ ನ್ಯಾಯಾಲಯದ ತೀರ್ಪುಗಳಲ್ಲಿ ವ್ಯಕ್ತವಾಗುತ್ತಿದೆ.ಕೆಂಪಣ್ಣ ಆಯೋಗವನ್ನು ರಚಿಸಿ…