ಬೆಂಗಳೂರು: ‘ಸಿಂದಗಿ ಜೆಡಿಎಸ್ ಶಾಸಕರಾಗಿದ್ದ ಎಂ.ಸಿ. ಮನಗೂಳಿ ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್ ಮಾಡುವ ಸ್ಥಿತಿ ಕಾಂಗ್ರೆಸ್ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಸಿಂದಗಿ ಉಪಚುನಾವಣೆಯಲ್ಲಿ ಎಂ.ಸಿ. ಮನಗೂಳಿ ಅವರ ಪುತ್ರ ಅಶೋಕ್ ಮನಗೂಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿಚಾರವಾಗಿ ಕುಮಾರಸ್ವಾಮಿ ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯಿಸಿದ ಅವರು ‘ಅಶೋಕ್ ಅವರು ನಮ್ಮ ಅಭ್ಯರ್ಥಿ. ಎಂ.ಸಿ. ಮನಗೂಳಿ ಅವರು ಬಂದು ನನ್ನನ್ನು ಭೇಟಿ ಮಾಡಿ ಮಾತನಾಡಿದ ವಿಚಾರವನ್ನು ಬಹಿರಂಗವಾಗಿ ಹೇಳಿದ್ದೇನೆ. ನಾನು ಮಾತ್ರವಲ್ಲ ಸಿದ್ದರಾಮಯ್ಯ ಕೂಡ ಈ ಪ್ರಸ್ತಾಪಿಸಿದ್ದಾರೆ. ನಾವು ಈ ವಿಚಾರದಲ್ಲಿ ಯಾಕೆ ಸುಳ್ಳು ಹೇಳಬೇಕು’ ಎಂದರು.

‘15 ದಿನಗಳ ಹಿಂದೆ ಭೇಟಿ ಮಾಡಿದ್ದರು ಅಂದರೆ ಕ್ಯಾಲೆಂಡರ್ ತೆಗೆದುಕೊಂಡು ಲೆಕ್ಕಹಾಕಿ ಹೇಳಿಲ್ಲ. ಅವರು ಸಾಯುವ ಸ್ವಲ್ಪ ದಿನಗಳ ಮೊದಲು ಭೇಟಿ ಮಾಡಿದ್ದರು. ತಮ್ಮ ಪಕ್ಷದಲ್ಲಿದ್ದವರು ಕಾಂಗ್ರೆಸ್ ಗೆ ಹೋಗಿದ್ದಾರಲ್ಲ ಎಂಬ ನೋವು ಕುಮಾರಣ್ಣ ಅವರಿಗಿದೆ. ಆ ನೋವಿನಿಂದ ಮಾತನಾಡಿದ್ದಾರೆ. ಅದಕ್ಕೆ ನಾನು ಬೇಸರ ಮಾಡಿಕೊಳ್ಳುವುದಿಲ್ಲ. ನಾವು ಯಾರನ್ನೂ ಹೈಜಾಕ್ ಮಾಡುವುದಿಲ್ಲ. ನಮ್ಮಲ್ಲಿ ಸಾಕಷ್ಟು ಸಂಖ್ಯಾಬಲ ಇದೆ. ನಮ್ಮ ಪಕ್ಷಕ್ಕೆ ಸ್ವ ಇಚ್ಛೆಯಿಂದ ಬರುವವರನ್ನು ನಾವು ಬೇಡ ಎನ್ನುವುದಿಲ್ಲ’ ಎಂದರು.

ಇದನ್ನೂ ಓದಿ... ಸುಳ್ಳು ಹೇಳುವ ಮೂಲಕ ಎಂಸಿ ಮನಗೂಳಿಗೆ ಡಿಕೆಶಿ ಅಪಚಾರ ಮಾಡಿದ್ದಾರೆ: ಎಚ್ಡಿಕೆ

‘ರಾಜಕಾರಣ ನಿಂತ ನೀರಲ್ಲ ಎಂದು ಕುಮಾರಣ್ಣ ಅವರೇ ಹೇಳಿದ್ದಾರೆ. ಕೆಲವರು ಬಿಜೆಪಿಗೆ ಹೋಗಲು ಸಿದ್ಧರಿರುತ್ತಾರೆ. 17 ಜನ ಸಂಸದರು ಗೆದ್ದು, ದೇವೇಗೌಡರು ದೇಶದ ಪ್ರಧಾನಿ ಆದಾಗ, ನಾವು ಅವರನ್ನು ಹೈಜಾಕ್ ಮಾಡಿ ಕರೆದುಕೊಂಡು ಬಂದಿದ್ದೆವಾ? ಒಂದಲ್ಲಾ ಒಂದು ಕಾರಣದಿಂದ ಬರುವವರು ಬರುತ್ತಾರೆ. ಈ ಹಿಂದೆ ಅನೇಕ ನಾಯಕರು ಕೂಡ ಅವರ ಜತೆ ರಾಜಕೀಯ ಭಿನ್ನಾಭಿಪ್ರಾಯದಿಂದ ಕಾಂಗ್ರೆಸ್ಗೆ ಬಂದಿದ್ದರು. ಅದೇ ರೀತಿ ಮನಗೂಳಿ ಅವರು ಸಾಯುವ ಮುನ್ನ ನನ್ನನ್ನು ಭೇಟಿ ಮಾಡಿದ್ದು ನಿಜ. ಆಗ ಅವರ ಪುತ್ರ ಅಶೋಕ್ ಅವರು ಇದ್ದದ್ದೂ ನಿಜ' ಎಂದರು.

'ನಾವು ಯಾರ ಮತವನ್ನೂ ಗುತ್ತಿಗೆಗೆ ತೆಗೆದುಕೊಂಡಿಲ್ಲ. ನನ್ನ ಮತವನ್ನೇ ನಾನು ಗುತ್ತಿಗೆ ತೆಗದುಕೊಳ್ಳಲು ಆಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಗೌಪ್ಯವಾಗಿ ಮತ ಹಾಕುತ್ತಾರೆ' ಎಂದೂ ಹೇಳಿದರು.

ಮಾಹಿತಿ ಬರುವವರೆಗೂ ಪ್ರತಿಕ್ರಿಯೆ ನೀಡಲ್ಲ: ‘ನೀರಾವರಿ ಇಲಾಖೆ ವಿಚಾರವಾಗಿ ಗುತ್ತಿಗೆದಾರರು ಹಾಗೂ ಯಡಿಯೂರಪ್ಪ ಅವರ ಆಪ್ತ ಸಹಾಯಕರ ಮನೆ ಮೇಲೆ ತೆರಿಗೆ ಇಲಾಖೆ ದಾಳಿ ನಡೆದಿದೆ ಎಂದು ಮಾಧ್ಯಮಗಳಲ್ಲಿ ನೋಡಿದೆ. ಇದರ ಹಿಂದೆ ಅನೇಕ ಲೆಕ್ಕಾಚಾರಗಳಿವೆ. ತೆರಿಗೆ ಇಲಾಖೆ ಕಡೆಯಿಂದ ಅಧಿಕೃತ ಹೇಳಿಕೆ ಬರುವವರೆಗೂ ನಾವು ಪ್ರತಿಕ್ರಿಯೆ ನೀಡಲು ಆಗುವುದಿಲ್ಲ’ ಎಂದರು.

‘ಏಕಾಏಕಿಯಾಗಿ ಇದು ರಾಜಕೀಯ ಪ್ರೇರಿತ ಎಂದು ಹೇಳಲು ನನ್ನ ಬಳಿ ಖಚಿತ ಮಾಹಿತಿ ಇಲ್ಲ. ಯಾರ ಮನೆಯಲ್ಲಿ ಎಷ್ಟು ಹಣ ಸಿಕ್ಕಿದೆ, ಏನು ದಾಖಲೆ ಸಿಕ್ಕಿದೆ ಎಂದು ಮಾಹಿತಿ ಬರುವವರೆಗೂ ಮಾತನಾಡಲು ಸಾಧ್ಯವಿಲ್ಲ. ಆಂತರಿಕ ರಾಜಕೀಯ ಇದ್ದೇ ಇರುತ್ತದೆ’ ಎಂದರು.

'ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಅಧಿಕಾರದಲ್ಲಿದೆ. ಅವರು ಯಾರನ್ನಾದರೂ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕು ಎಂದರೆ ಅದನ್ನು ಮಾಡುತ್ತಾರೆ. ಆತ ಯಡಿಯೂರಪ್ಪ ಅವರ ಆಪ್ತ ಸಹಾಯಕ ಅಲ್ಲ ಎಂದು ಹೇಳಲು ಸಾಧ್ಯವಿಲ್ಲ ಅಲ್ಲವೇ? ಕೇವಲ ಅವರು ಮಾತ್ರವಲ್ಲ. ಈ ಹಿಂದೆ ಇದ್ದ ಮಾಜಿ ನೀರಾವರಿ ಮಂತ್ರಿಗಳ ಮೇಲೆ ವಿಚಾರಣೆ ನಡೆಯಲಿದೆ ಎಂಬ ಮಾಹಿತಿ ಬಂದಿದೆ. ಕೆಲವು ಮಂತ್ರಿಗಳು ಕೂಡ ನಮ್ಮ ಮನೆ ಮೇಲೆ ದಾಳಿ ಮಾಡಬೇಡಿ ಎಂದು ದೆಹಲಿಯಲ್ಲಿ ಹೋಗಿ ಮನವಿ ಮಾಡಿದ್ದರು ಎಂಬ ಮಾಹಿತಿ ಇದೆ' ಎಂದರು.

'ಐಟಿ ದಾಳಿ ಒಂದೆರಡು ದಿನಗಳಲ್ಲಿ ಮಾಡುವ ವಿಚಾರವಲ್ಲ. ಇದರ ಹಿಂದೆ ಯೋಜನೆ ಇರುತ್ತದೆ. ಕೆಲವರನ್ನು ರಕ್ಷಣೆ ಮಾಡುತ್ತಿದ್ದಾರೆ. ನೀರಾವರಿ ಇಲಾಖೆಗೆ ಸಂಬಂಧಿಸಿದ ದಾಳಿ ಎಂದರೆ ಕಳೆದೊಂದು ವರ್ಷದಿಂದ ಏನೇನಾಗಿದೆ ಎಂಬ ಮಾಹಿತಿ ಇರುತ್ತದೆ. ಯಾರೆಲ್ಲಾ ಇದರಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿಯೂ ಇದೆ. ತೆರಿಗೆ ಇಲಾಖೆ ದಾಳಿ ನಂತರ ಕೇವಲ ಮುಖ್ಯಮಂತ್ರಿ ಮಾತ್ರ ದೆಹಲಿಗೆ ಹೋಗಿಲ್ಲ. ಅವರ ಜತೆ ಮಾಜಿ ನೀರಾವರಿ ಮಂತ್ರಿಗಳೂ ಹೋಗಿದ್ದಾರೆ' ಎಂದರು.

ಕೇಸರಿಕರಣಕ್ಕಾಗಿ ಎನ್ಇಪಿ: ‘ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರಿಕರಣ ಮಾಡಲಾಗುತ್ತಿದೆ ಎಂಬ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಬೇರೆ ರಾಜ್ಯಗಳಲ್ಲಿ ಜಾರಿಯಾಗದ ಶಿಕ್ಷಣ ನೀತಿ ನಮ್ಮ ರಾಜ್ಯದಲ್ಲಿ ಮಾತ್ರ ತರಾತುರಿಯಲ್ಲಿ ಜಾರಿ ಮಾಡುತ್ತಿರುವುದೇಕೆ’ ಎಂದು ಶಿವಕುಮಾರ್ ಪ್ರಶ್ನಿಸಿದರು.

'ಈ ವಿಚಾರವಾಗಿ ಪೋಷಕರು, ಮಕ್ಕಳು, ಶಿಕ್ಷಣ ತಜ್ಞರ ಜತೆ ಚರ್ಚೆ ಮಾಡಬೇಕು. ಇಡೀ ಶಿಕ್ಷಣ ವ್ಯವಸ್ಥೆಯನ್ನೇ ಏಕಕಾಲಕ್ಕೆ ಬದಲಿಸುತ್ತೇನೆ, ನಿಮ್ಮ ಪದವಿಗೆ ಪ್ರಾಮುಖ್ಯತೆ ಇಲ್ಲ, ಒಂದು ವರ್ಷ ಪದವಿ ಓದಿದರೂ ಪ್ರಮಾಣಪತ್ರ ಕೊಡುತ್ತೇವೆ ಎನ್ನುವುದಾದರೆ ಇವರು ಯಾವ ಸೀಮೆ ಶಿಕ್ಷಣ ವ್ಯವಸ್ಥೆ ತರಲು ಹೊರಟಿದ್ದಾರೆ. ಗುರುಕುಲ ಸಂಸ್ಕೃತಿ ಎನ್ನುತ್ತಾರಲ್ಲಾ, ಇಷ್ಟು ದಿನ ನಮ್ಮಲ್ಲಿದ್ದ ಶಿಕ್ಷಣ ವ್ಯವಸ್ಥೆ ಏನಾಗಿದೆ? ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಇಡೀ ವಿಶ್ವದ ಆರ್ಥಿಕತೆ ಕುಸಿದುಬಿದ್ದರೂ ಭಾರತದ ಆರ್ಥಿಕತೆ ಬಿದ್ದಿರಲಿಲ್ಲ. ಅಂತಹ ಶಿಕ್ಷಣ ಬೇಡವೇ? ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಓದಿದ ಡಾಕ್ಟರ್, ಇಂಜಿನಿಯರ್ ಗಳು ವಿಶ್ವದೆಲ್ಲೆಡೆ ಕೆಲಸ ಮಾಡುತ್ತಿದ್ದಾರೆ. ಅದು ಸರಿ ಇಲ್ಲವೇ? ಇವರು ದಿನಬೆಳಗಾದರೆ ತಮ್ಮ ವಿಚಾರಧಾರೆಯನ್ನು ಮಕ್ಕಳ ತಲೆಗೆ ತುಂಬಲು ಈ ರೀತಿ ಮಾಡುತ್ತಿದ್ದಾರೆ' ಎಂದು ಆರೋಪಿಸಿದರು.

‘ಈ ನೀತಿ ಜಾರಿಗೆ ತರುವುದೇ ಆದರೆ, ಸಂಸತ್ತಿನಲ್ಲಿ ಯಾಕೆ ಚರ್ಚೆಯಾಗಿಲ್ಲ? ವಿಧಾನಮಂಡಲ ಅಧಿವೇಶನದಲ್ಲಿ ಯಾಕೆ ಚರ್ಚೆಯಾಗಿಲ್ಲ? ಈ ವಿಚಾರವಾಗಿ ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಪೋಷಕರಲ್ಲಿ ಅರಿವು ಮೂಡಿಸುತ್ತೇವೆ. ನಾನು ರಾಜಕಾರಣಿಯಷ್ಟೇ ಅಲ್ಲ. ಶಿಕ್ಷಣ ಸಂಸ್ಥೆಯನ್ನು ನಡೆಸುತ್ತಿದ್ದು, ನಾನು ಇದನ್ನು ಆಳವಾಗಿ ಅಧ್ಯಯನ ಮಾಡಿದ್ದೇನೆ. ಇದರಲ್ಲಿ ಒಂದೆರಡು ಒಳ್ಳೆಯ ಅಂಶಗಳಿರಬಹುದು, ಆದರೆ ಇದು ಸ್ಪಷ್ಟವಾಗಿ ಕೇಸರಿಕರಣದ ಪ್ರಯತ್ನ’ ಎಂದರು.

‘ಇದು ಒಳ್ಳೆಯ ನೀತಿಯಾಗಿದ್ದರೆ ಉತ್ತರ ಪ್ರದೇಶ, ಮಧ್ಯಪ್ರದೇಶ ಹಾಗೂ ಗುಜರಾತಿನಲ್ಲಿ ಜಾರಿಗೊಳಿಸಲು ಹೇಳಿ. ಬೇರೆ ರಾಜ್ಯಗಳಲ್ಲಿ ಮಾಡಲಾಗದ್ದನ್ನು ನಮ್ಮಲ್ಲಿ ಮಾಡಿದ್ದೇನೆ ಎಂದು ಹೈಕಮಾಂಡ್ ಓಲೈಸಲು ಹೊರಟಿದ್ದಾರೆ. ತಮ್ಮ ಸ್ವಾರ್ಥಕ್ಕಾಗಿ ನಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡಲು ಬಿಡುವುದಿಲ್ಲ. ಇದರ ವಿರುದ್ಧ ಚಳವಳಿ, ಆಂದೋಲನ ಮಾಡುತ್ತೇವೆ’ ಎಂದೂ ಎಚ್ಚರಿಕೆ ನೀಡಿದರು.

ಉತ್ತಮ ಬೆಂಬಲ: ‘ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪರವಾಗಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಉತ್ಸಾಹ, ಬೆಂಬಲ ಸಿಕ್ಕಿದ್ದು, ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ. ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೂ ಇದ್ದ ಚುನಾವಣೆ ಪ್ರಚಾರದ ಅವಕಾಶವನ್ನು ರಾತ್ರಿ 7ಗಂಟೆಗೆ ಸೀಮಿತಗೊಳಿಸಿ ಹೊಸ ನಿಯಮ ತಂದಿದ್ದಾರೆ. ನಾವು ನಮ್ಮದೇ ಆದ ತಂತ್ರಗಾರಿಕೆ ಮೂಲಕ ಪ್ರಚಾರ ಮಾಡುತ್ತೇವೆ. ನಾವು ನಿತ್ಯ ಆಂತರಿಕ ವರದಿ ಪಡೆಯುತ್ತಿರುತ್ತೇವೆ. ಮುಖ್ಯಮಂತ್ರಿಗೂ ನಿತ್ಯ ವರದಿ ಹೋಗುತ್ತಿರುತ್ತದೆ. ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂಬ ಮಾಹಿತಿಯೇ ಮುಖ್ಯಮಂತ್ರಿಗಳಿಗೆ ರವಾನೆಯಾದ ವರದಿಯಲ್ಲೂ ಇದೆ’ ಎಂದರು.

ರಮೇಶ ಜಾರಕಿಹೊಳಿ ಆಪ್ತರು ಭೇಟಿ ಮಾಡಿದ್ದು ನಿಜ: ‘ರಮೇಶ ಜಾರಕಿಹೊಳಿ ಅವರ ಆಪ್ತರು ನನ್ನನ್ನು ಬಂದು ಭೇಟಿ ಮಾಡಿದ್ದರು. ಅನೇಕ ವಿಚಾರ ಚರ್ಚೆ ಮಾಡಿದ್ದಾರೆ. ಅವರ ಸಂದೇಶಗಳನ್ನು ತಿಳಿಸಿದ್ದಾರೆ. ಈ ವಿಚಾರಗಳನ್ನು ನಾನು ಈಗ ಗೌಪ್ಯವಾಗಿ ಇಡಬೇಕಿದೆ. ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.