ಬೆಂಗಳೂರು: ‘ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ತಾವು ಜೀವಮಾನದಲ್ಲಿ ಮುಖ್ಯಮಂತ್ರಿ ಆಗುವುದಿಲ್ಲ ಎಂಬ ಹತಾಶೆಯಲ್ಲಿರುವ ಕೆ.ಎಸ್.ಈಶ್ವರಪ್ಪ ಅವರಿಗೆ ಹುಚ್ಚು ಹಿಡಿದಿದೆ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ನಾಯಕರ ಕುರಿತ ಈಶ್ವರಪ್ಪ ಅವರ ಹೇಳಿಕೆಯನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಈಶ್ವರಪ್ಪ ಅವರಿಗೆ ಹುಚ್ಚು ಹಿಡಿದಿದ್ದು, ನಾಲಿಗೆ – ಮಿದುಳಿಗೆ ಸಂಪರ್ಕ ತಪ್ಪಿದೆ’ ಎಂದು ವ್ಯಂಗ್ಯವಾಡಿದೆ.

‘ಈಶ್ವರಪ್ಪ ಅವರೇ, ನಿಮ್ಮ ಚಿಕಿತ್ಸೆಯ ವೆಚ್ಚವನ್ನು ಕಾಂಗ್ರೆಸ್ ಭರಿಸುತ್ತದೆ. ಕೂಡಲೇ ನಿಮ್ಹಾನ್ಸ್ಗೆ ದಾಖಲಾಗಿ’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಭಾನುವಾರ ಸಚಿವ ಕೆ.ಎಸ್.ಈಶ್ವರಪ್ಪ ವಿವಾದ್ಮಾತಕ ಹೇಳಿಕೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.