ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಗೂಂಡಾಗಿರಿ ಮತ್ತೆ ಆರಂಭಗೊಂಡಿದ್ದು, ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಹೊರಟಂತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಮಹಮ್ಮದ್ ನಲಪಾಡ್ ಬೆಂಬಲಿಗರು ಹಲ್ಲೆ ನಡೆಸಿರುವುದನ್ನು ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಶಿಷ್ಯ ಮಹಮ್ಮದ್ ನಲಪಾಡ್ ಬೆಂಬಲಿಗರು ಕಾಂಗ್ರೆಸ್ ಕಾರ್ಯಕರ್ತರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಇದನ್ನು ಗಮನಿಸಿದರೆ ಕಾಂಗ್ರೆಸ್ಸಿಗರು ಕರ್ನಾಟಕವನ್ನು ಗೂಂಡಾ ರಾಜ್ಯ ಮಾಡಲು ಹೊರಟಂತಿದೆ’ ಎಂದು ಕಿಡಿಕಾರಿದೆ.

‘ಯುವ ಕಾಂಗ್ರೆಸ್ಸಿನ ನಿಯೋಜಿತ ಅಧ್ಯಕ್ಷ ನಲಪಾಡ್ ರೌಡಿಸಂ ಪ್ರಕರಣಗಳು ಇದೇ ಮೊದಲೇನಲ್ಲ. ಅಮಾಯಕ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ, ದಲಿತ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರಿಗೆ ಬೆದರಿಕೆ ಸೇರಿದಂತೆ ಅನೇಕ ಪ್ರಕರಣಗಳು ಈ ಪುಡಿ ರೌಡಿಯ ಮೇಲಿದೆ. ಆದರೂ, ಕೆಪಿಸಿಸಿ ಅಧ್ಯಕ್ಷ (ಡಿ.ಕೆ.ಶಿವಕುಮಾರ್) ಮೌನಕ್ಕೆ ಶರಣಾಗಿರುವುದೇಕೆ?’ ಎಂದು ಬಿಜೆಪಿ ಪ್ರಶ್ನಿಸಿದೆ.

ಇತ್ತೀಚೆಗೆ ಎಂ.ಎಸ್. ರಕ್ಷಾ ರಾಮಯ್ಯ ಬೆಂಬಲಿಗನ ಮೇಲೆ ಮಹಮ್ಮದ್ ನಲಪಾಡ್ ಸೇರಿದಂತೆ ಆತನ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿತ್ತು.

ಓದಿ... UP Elections: ಸಿ.ಎಂ ಯೋಗಿ ಆದಿತ್ಯನಾಥ್ ವಿರುದ್ಧ ಚಂದ್ರಶೇಖರ್ ಆಜಾದ್ ಕಣಕ್ಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.