ಬೆಂಗಳೂರು: ಹೊನ್ನಾಳಿ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಇಂದು (ಬುಧವಾರ) ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಡಿ.ಕೆ ಶಿವಕುಮಾರ್ ಅವರನ್ನು ಇಂದು ಬೆಂಗಳೂರಿನ ಅವರ ನಿವಾಸದಲ್ಲಿ ಸೌಜನ್ಯಯುತವಾಗಿ ಭೇಟಿಯಾಗಿ ಅಭಿನಂದಿಸಿದ್ದೇನೆ ಎಂದು ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.

ಡಿಕೆಶಿ ಭೇಟಿ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ರಾಜಕೀಯ ಹೊರತುಪಡಿಸಿ ನಮ್ಮ ನಡುವೆ ಉತ್ತಮ ಸಂಬಂಧವಿದೆ. ಹಾಗಾಗಿ ಸೌಜನ್ಯಯುತವಾಗಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇನೆ’ ಎಂದಿದ್ದಾರೆ.

ಕಾಂಗ್ರೆಸ್–ಬಿಜೆಪಿಯ ಹಿರಿಯ ನಾಯಕರೆಲ್ಲ ಹೊಂದಾಣಿಕೆ ರಾಜಕಾರಣ ಮಾಡಿಕೊಂಡಿದ್ದರಿಂದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲಾಯಿತು ಎಂಬ ಸಿ.ಟಿ.ರವಿ ಹಾಗೂ ಸಂಸದ ಪ್ರತಾಪ ಸಿಂಹ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಹೊಂದಾಣಿಕೆ ರಾಜಕಾರಣ ಮಾಡಿಕೊಂಡವರ ಹೆಸರನ್ನು ಸಿ.ಟಿ.ರವಿ ಮತ್ತು ಪ್ರತಾಪ ಸಿಂಹ ಅವರೇ ಬಹಿರಂಗಪಡಿಸಬೇಕು’ ಎಂದಿದ್ದಾರೆ.

ಇವನ್ನೂ ಓದಿ...

* ಸಿ.ಟಿ.ರವಿ, ಪ್ರತಾಪ ಸಿಂಹಗೆ ದಮ್ಮಿದ್ರೆ ಹೊಂದಾಣಿಕೆ ಮಾಡಿಕೊಂಡವರ ಹೆಸರೇಳಲಿ: ಕಾಂಗ್ರೆಸ್ ಸವಾಲು

*  ಊಸರವಳ್ಳಿ ವೈಖರಿ ಸಂಶಯಕ್ಕೆ ದಾರಿ: ಬಿಜೆಪಿ ದಾರಿಯಲ್ಲಿಯೇ ಕಾಂಗ್ರೆಸ್ ಸರ್ಕಾರ: ಎಚ್ಡಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.