ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ @BSBommai ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ವಿಧಾನ ಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲಿ ಭಾಗವಹಿಸಿ, ಸರ್ಕಾರಕ್ಕೆ ಸಲಹೆ ನೀಡಿದೆ. 1/5#SocialJusticepic.twitter.com/B4yDKJKE3U
ಒಂದು ವೇಳೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ವರದಿ ಪರಿಗಣನೆ ಸಾಧ್ಯವಾಗದಿದ್ದರೆ ಹೊಸ ಆಯೋಗವನ್ನು ರಚನೆ ಮಾಡಿ ಸಮೀಕ್ಷೆ ನಡೆಸುವುದು ಸೂಕ್ತ. ಅಲ್ಲಿಯವರೆಗೆ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬಾರದು. ಇಲ್ಲದಿದ್ದರೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗದಂತೆ ಆಗುತ್ತದೆ. 5/5#SocialJustice
ಮೀಸಲು ಸೌಲಭ್ಯ ಒದಗಿಸುವ ಮುನ್ನ ಸಮೀಕ್ಷೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ. ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಈಗಾಗಲೇ ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆ ನಡೆಸಿ ವರದಿ ಸಲ್ಲಿಸಿದೆ. ಆ ವರದಿಯನ್ನು ಪರಿಗಣಿಸುವ ಸಾಧ್ಯತೆ ಕುರಿತಾಗಿಯೂ @BJP4Karnataka ಸರ್ಕಾರ ಪರಿಶೀಲನೆ ನಡೆಸಬೇಕು. 4/5#SocialJustice
ಹಿಂದುಳಿದ ವರ್ಗದವರನ್ನು ಸಾಮಾನ್ಯ ವರ್ಗದಲ್ಲಿ ಸೇರಿಸಿ ಚುನಾವಣೆ ನಡೆಸಲು ಸಾಧ್ಯವಿಲ್ಲ. ಮೀಸಲು ಸೌಲಭ್ಯ ಕಲ್ಪಿಸದೆ ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಿದರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗುತ್ತದೆ. 3/5#SocialJustice