ಬೆಂಗಳೂರು: ಪೊಲೀಸ್ ಸಬ್ಇನ್ಸ್ಪೆಕ್ಟರ್ (ಪಿಎಸ್ಐ) 402 ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ ಪ್ರಕಟಿಸಿದೆ.

ಅ.3ರಂದು ನಡೆದಿದ್ದ ಲಿಖಿತ ಪರೀಕ್ಷೆಯಲ್ಲಿ (ಪತ್ರಿಕೆ -1 ಮತ್ತು 2) ಅಭ್ಯರ್ಥಿಗಳು ಅಂತಿಮವಾಗಿ ಪಡೆದ ಅಂಕಗಳ ವಿವರಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಿದ್ದು, ಸದರಿ ಪಟ್ಟಿಯನ್ನು ನೇಮಕಾತಿ ವಿಭಾಗದ ಪೊಲೀಸ್ ಮಹಾನಿರ್ದೇಶಕರಿಗೆ ಹಸ್ತಾಂತರಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ತಾತ್ಕಾಲಿಕ ಅಂಕಪಟ್ಟಿಗೆ ಬಂದ ಎಲ್ಲ ಆಕ್ಷೇಪಣೆಗಳನ್ನೂ ಕೂಲಂಕಶವಾಗಿ ಪರಿಶೀಲಿಸಿದ್ದು, ಈಗಾಗಲೇ ಅಭ್ಯರ್ಥಿಗಳು ಪಡೆದಿರುವ ಅಂಕಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ. ಪತ್ರಿಕೆ-1ರ ಉತ್ತರ ಪತ್ರಿಕೆಗಳನ್ನು ಎರಡು ಬಾರಿ ಮೌಲ್ಯಮಾಪನಕ್ಕೆ ಒಳಪಡಿಸಲಾಗಿದೆ. ಎಂಟು ಅಂಕ ಹಾಗೂ ಅದಕ್ಕಿಂತ ಹೆಚ್ಚು ವ್ಯತ್ಯಾಸ ಕಂಡುಬಂದ ಉತ್ತರ ಪತ್ರಿಕೆಗಳನ್ನು ಮೂರನೇ ಮೌಲ್ಯಮಾಪನ ಮಾಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

24ಕ್ಕೆ ಕೆ–ಸೆಟ್ ಪರೀಕ್ಷೆ:

ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ನ.24ರಂದು 12 ಜಿಲ್ಲೆಗಳಲ್ಲಿ ನಡೆಯಲಿದೆ. ರಾಯಚೂರು ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆಯೂ ಸಹ ಅಂದೇ ಬೆಂಗಳೂರಿನಲ್ಲಿ ನಡೆಯಲಿದೆ. ಈ ಎರಡೂ ಪರೀಕೆಗಳ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಕೆ-ಸೆಟ್ ಪರೀಕ್ಷೆಯನ್ನು 1.05 ಲಕ್ಷ ಅಭ್ಯರ್ಥಿಗಳು, ರಾಯಚೂರು ವಿವಿ ಸಹಾಯಕ ಉಪನ್ಯಾಸಕರ ನೇಮಕಾತಿ ಪರೀಕ್ಷೆಯನ್ನು 2 ಸಾವಿರ ಅಭ್ಯರ್ಥಿಗಳು ತೆಗೆದುಕೊಂಡಿದ್ದಾರೆ. ಎಂದು ವಿವರಿಸಿದರು.

ಜಿಟಿಟಿಸಿ ಪರೀಕ್ಷೆ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ (ಜಿಟಿಟಿಸಿ)ವಿವಿಧ ಹುದ್ದೆಗಳಿಗೆ ಡಿ. 9, 10, 11 ಮತ್ತು 14ರಂದು ಪರೀಕ್ಷೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.