ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Karnataka Rains | ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

Published 22 ಜುಲೈ 2024, 16:21 IST
Last Updated 22 ಜುಲೈ 2024, 16:21 IST
ಅಕ್ಷರ ಗಾತ್ರ

ಬೆಂಗಳೂರು: ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಲ್ಲಿ ಜುಲೈ 23 ಮತ್ತು 24ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

30 ರಿಂದ 40 ಕಿ.ಮೀ ವೇಗದಲ್ಲಿ ಈ ಜಿಲ್ಲೆಗಳಲ್ಲಿ ಗಾಳಿ ಬೀಸಲಿದೆ. ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ತಾಸುಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್ ರಾಕ್ (20 ಸೆಂ.ಮೀ), ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪದಲ್ಲಿ (13 ಸೆಂ.ಮೀ) ಹೆಚ್ಚು ಮಳೆ ದಾಖಲಾಗಿದೆ. ಇದೇ ಪ್ರದೇಶದಲ್ಲಿ ಕೆಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ.

ಹೊನ್ನಾವರ, ಆಗುಂಬೆಯಲ್ಲಿ ತಲಾ 11 ಸೆಂ.ಮೀ ಮಳೆ ಸುರಿದಿದೆ. ಸಿದ್ದಾಪುರ 10, ಉಡುಪಿ, ಧರ್ಮಸ್ಥಳ, ಲಿಂಗನಮಕ್ಕಿ, ಕಮ್ಮರಡಿ, ಹುಂಚದಕಟ್ಟೆ, ಕೊಟ್ಟಿಗೆಹಾರದಲ್ಲಿ ತಲಾ 8 ಸೆಂ.ಮೀ ಹಾಗೂ ಕುಂದಾಪುರ, ಕುಮಟಾ, ಲೋಂಡಾ, ಕೊಪ್ಪದಲ್ಲಿ ತಲಾ 7 ಸೆಂ. ಮೀ ಮಳೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT