ಬೆಂಗಳೂರು: ಕರಾವಳಿ ಸೇರಿ ರಾಜ್ಯದ ವಿವಿಧೆಡೆ ಗಾಳಿ–ಮಳೆಯ ತೀವ್ರತೆ ಸೋಮವಾರದಿಂದ ತಗ್ಗುವ ಸಾಧ್ಯತೆಯಿದ್ದು, ಮುಂದಿನ ಒಂದು ವಾರ ಕೆಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಗೆ ಮಾತ್ರ ಸೋಮವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದ್ದು, ಭಾರಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿಯ ಉಳಿದ ಜಿಲ್ಲೆಗಳು ಹಾಗೂ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ 30ರಿಂದ 40 ಕಿ.ಮೀ ವೇಗದಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಉದ್ದಕ್ಕೂ ಬಿರುಗಾಳಿಯಿಂದ ಕೂಡಿದ ಹವಾಮಾನ ಇರಲಿದೆ. ಗಂಟೆಗೆ 35ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ, ಮೀನುಗಾರರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯು ನಿರಂತರವಾಗಿ ಬೀಸುವ ಸಂಭವವಿದ್ದು, ವೇಗವು 40 ರಿಂದ 50 ಕಿ.ಮೀ ತಲುಪಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.