ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ಯಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೊ ಮಹತ್ವದ ಸಾಧನೆ: ವಿಜ್ಞಾನಿ ರೂಪಾ ಅಭಿಮತ

ಸುವರ್ಣ ಕರ್ನಾಟಕ ವರ್ಷಾಚರಣೆ
Published 23 ನವೆಂಬರ್ 2023, 15:52 IST
Last Updated 23 ನವೆಂಬರ್ 2023, 15:52 IST
ಅಕ್ಷರ ಗಾತ್ರ

ಬೆಂಗಳೂರು: ‘ಬ್ಯಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಇಸ್ರೊ ಮಹತ್ವದ ಸಾಧನೆಗಳನ್ನು ಮಾಡುವ ಯೋಜನೆಗಳನ್ನು ರೂಪಿಸಿದ್ದು, ಇದರ ಯಶಸ್ಸಿಗೆ ವಿಜ್ಞಾನಿಗಳು ಶ್ರಮವಹಿಸುತ್ತಿದ್ದಾರೆ’ ಎಂದು ಇಸ್ರೊ ವಿಜ್ಞಾನಿ ಎಂ.ವಿ. ರೂಪ ತಿಳಿಸಿದರು.

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಹೆಣ್ಣೂರು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ, ದಂಡು ಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿದ್ದ ಸುವರ್ಣ ಕರ್ನಾಟಕ ವರ್ಷಾಚರಣೆ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. 

‘ಕೇಂದ್ರ ಸರ್ಕಾರದ ಪ್ರೋತ್ಸಾಹದಿಂದ ಇನ್ನಷ್ಟು ಸಂಶೋಧನೆಗಳನ್ನು ಮಾಡಲು ಅನುಕೂಲವಾಗಿದೆ. ಹಲವಾರು ಕನ್ನಡಿಗರು ವಿಜ್ಞಾನ–ತಂತ್ರಜ್ಞಾನ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಹೆಮ್ಮೆಯ ವಿಷಯವಾಗಿದೆ’ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ, ‘ಆಂಗ್ಲರು ವಾಸವಿದ್ದ ದಂಡು ಪ್ರದೇಶದಲ್ಲಿ ಇಲ್ಲಿನ ಕನ್ನಡ ಸಂಘಟನೆಗಳು 20 ವರ್ಷಗಳಿಂದ ಕನ್ನಡೇತರರಿಗೆ ನಮ್ಮ ಸಂಸ್ಕೃತಿ, ಕಲೆಯ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿವೆ. ಜೊತೆಗೆ ನಿರಂತರ ಕನ್ನಡದ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಮುಂದಿನ ದಿನಗಳಲ್ಲಿ ದಂಡು ಪ್ರದೇಶದಲ್ಲಿ ಕನ್ನಡ ಕಟ್ಟುವ ಕೆಲಸದಲ್ಲಿ ಕಸಾಪ ಒಕ್ಕೂಟಗಳ ಜೊತೆಗೆ ಕೆಲಸ ಮಾಡಲಿದೆ’ ಎಂದು ಭರವಸೆ ನೀಡಿದರು.

ರಾಜ್ಯಸಭೆ ಮಾಜಿ ಸದಸ್ಯ ಕೆ.ಸಿ. ರಾಮಮೂರ್ತಿ, ‘ಪ್ರಜಾವಾಣಿ’ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ, ದಂಡು ಪ್ರದೇಶ ಕನ್ನಡ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೆ.ಸಿ. ಜಗನ್ನಾಥ ರೆಡ್ಡಿ, ಹೆಣ್ಣೂರು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ವಿ.ಜೆ.ಕೆ. ಭಕ್ತವತ್ಸವಲಂ, ಪ್ರಧಾನ ಕಾರ್ಯದರ್ಶಿ ಎನ್. ಮುನಿರಾಜು, ಪ್ರಭಾಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT