ಬೆಂಗಳೂರು: ರಾಜ್ಯದಲ್ಲಿ ಗುರುವಾರ 1,046 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕುಟುಂಬ ಹಾಗೂ ಆರೋಗ್ಯ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಈ ಮೂಲಕ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ ಮಾತ್ರವಾಗಿ 984 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.

ಇದನ್ನೂ ಓದಿ:ಕೋವಿಡ್: ಕಳೆದ ವಾರ 41 ಲಕ್ಷಕ್ಕೂ ಅಧಿಕ ಪ್ರಕರಣ ಪತ್ತೆ– ಡಬ್ಲ್ಯುಎಚ್ಒ

ರಾಜ್ಯದಲ್ಲಿ ಬುಧವಾರದಂದು ಬೆಂಗಳೂರಿನಲ್ಲಿ 1,109 ಸೇರಿದಂತೆ ಒಟ್ಟು 1,249 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು.

ಹಾಗಿದ್ದರೂ ಸಕ್ರಿಯ ಪ್ರಕರಣಗಳಲ್ಲಿ ಏರಿಕೆಯಾಗಿದ್ದು, 5,896ಕ್ಕೆ ತಲುಪಿದೆ. ಬುಧವಾರದಂದು ಸಕ್ರಿಯ ಪ್ರಕರಣಗಳ ಸಂಖ್ಯೆ 5,707 ಆಗಿತ್ತು.

ಇಂದು ಆಸ್ಪತ್ರೆಯಿಂದ 857 ಮಂದಿ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ಈವರೆಗೆ ಒಟ್ಟು 39.23 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ.

ರಾಜ್ಯದಲ್ಲಿ ಗುರುವಾರ ಕೊರೊನಾ ಸೋಂಕಿನಿಂದಾಗಿ ಯಾವುದೇ ಸಾವು ವರದಿಯಾಗಿಲ್ಲ. ಇದುವರೆಗೆ ಒಟ್ಟು 40,075 ಮಂದಿ ಮೃತಪಟ್ಟಿದ್ದಾರೆ.

ದೈನಂದಿನ ಕೋವಿಡ್ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 4.03ರಷ್ಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.