ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಆಡಳಿತಾಧಿಕಾರಿ ನೇಮಿಸಿದ ಸಹಕಾರ ಇಲಾಖೆಯ ಆದೇಶಕ್ಕೆ ಸರ್ಕಾರಿ ನೌಕರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಈಗಾಗಲೇ ಚುನಾವಣೆ ಘೋಷಣೆಯಾಗಿದೆ. ಚುನಾವಣಾಧಿಕಾರಿಯನ್ನೂ ನೇಮಿಸಲಾಗಿದೆ. ಮೊದಲ ಹಂತದಲ್ಲಿ ಬೆಂಗಳೂರು ನಗರ ವ್ಯಾಪ್ತಿಯ ವಿವಿಧ ಇಲಾಖೆಗಳ ರಾಜ್ಯ ಪರಿಷತ್ನ 102 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 42 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಪ್ರಕ್ರಿಯೆಯ ನಡುವೆಯೇ ಸಂಘಕ್ಕೆ ಆಡಳಿತಾಧಿಕಾರಿಯೊಬ್ಬರನ್ನು ನೇಮಿಸಿರುವುದು ಇತಿಹಾಸದಲ್ಲಿ ಇದೇ ಮೊದಲು. ಇಲಾಖೆಯ ನಡೆ ಸರಿಯಲ್ಲ’ ಎಂದು ಲೋಕೋಪಯೋಗಿ ಇಲಾಖೆ ನೌಕರ ರುದ್ರಪ್ಪ ದೂರಿದ್ದಾರೆ.

‘ಸಂಘದ ಆಡಳಿತ ಮಂಡಳಿ ಅವಧಿ ಮುಕ್ತಾಯವಾಗಿದೆ. ಹಾಗಾಗಿ, ಆಡಳಿತಾಧಿಕಾರಿ ನೇಮಕ ಮಾಡಲಾಗಿದೆ ಎನ್ನುವುದು ಇಲಾಖೆ ನೀಡಿದ ಸಮಜಾಯಿಷಿ. ಆದರೆ, ಹಿಂದೆ ನಡೆದ ಯಾವ ಚುನಾವಣೆಯಲ್ಲೂ ಆಡಳಿತಾಧಿಕಾರಿ ನೇಮಕವಾಗಿಲ್ಲ. ಹಿಂದಿನ ಆಡಳಿತ ಮಂಡಳಿಯೇ ಪ್ರಭಾರ ಉಸ್ತುವಾರಿಯಾಗಿ ಫಲಿತಾಂಶದವರೆಗೂ ಮುಂದುವರಿಯುತ್ತಿತ್ತು. ಈಗ ಸರ್ಕಾರ ಹೊಸ ಸಂಪ್ರದಾಯ ಹುಟ್ಟುಹಾಕಿದೆ’ ಎಂದು ಸಚಿವಾಲಯದ ನೌಕರ ರಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸರ್ಕಾರಿ ನೌಕರರ ಸಂಘದ ಚುನಾವಣಾ ಪ್ರಕ್ರಿಯೆ ಸೆ. 17ರಿಂದ ಆರಂಭವಾಗಿತ್ತು. ಅ.7ರಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಧಾನ ವ್ಯವಸ್ಥಾಪಕ (ಕೆಎಎಸ್ ಆಯ್ಕೆಶ್ರೇಣಿ) ಸಿ.ಎನ್. ಮಂಜುನಾಥ್ ಅವರನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ಇಲಾಖೆ ನೇಮಿಸಿತ್ತು. ಡಿ.27ಕ್ಕೆ ಚುನಾವಣಾ ಅಂತಿಮ ಫಲಿತಾಂಶ ಹೊರಬೀಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.