ಬೆಂಗಳೂರು: ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ (ಯೋಜನಾ ಮಂಡಳಿ) ಉಪಾಧ್ಯಕ್ಷರಾಗಿ ರಾಜ್ಯಸಭೆಯ ಮಾಜಿ ಸದಸ್ಯ ಎಂ.ವಿ. ರಾಜೀವ್ ಗೌಡ ಅವರನ್ನು ನೇಮಿಸಲಾಗಿದೆ.

ಅವರಿಗೆ ಸಂಪುಟ ದರ್ಜೆಯ ಸಚಿವ ಸ್ಥಾನ ನೀಡಲಾಗಿದೆ. ಆರ್ಥಿಕ ಮತ್ತು ಶಿಕ್ಷಣ ತಜ್ಞರಾದ ರಾಜೀವ್ ಗೌಡ ಅವರು ಬೆಂಗಳೂರಿನ ಐಐಎಂ ಪ್ರಾಧ್ಯಾಪಕರಾಗಿ, ಸಾರ್ವಜನಿಕ ನೀತಿ ಕೇಂದ್ರದ ಮುಖ್ಯಸ್ಥರಾಗಿ, ಆರ್‌ಬಿಐ ಕೇಂದ್ರ ಮಂಡಳಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಚುನಾವಣಾ ಪ್ರಣಾಳಿಕೆಯ ಸಂಚಾಲಕರಾಗಿದ್ದರು.

ಪ್ರಕಾಶ ಹುಕ್ಕೇರಿ ದೆಹಲಿ ಪ್ರತಿನಿಧಿ:

ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರನ್ನು ನೇಮಿಸಲಾಗಿದೆ. ಅವರಿಗೂ ಸಂಪುಟ ದರ್ಜೆಯ ಸ್ಥಾನ ನೀಡಲಾಗಿದೆ. ಹುಕ್ಕೇರಿ ಹಿಂದೆ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.