ಬೆಂಗಳೂರು: ಕರ್ನಾಟಕದ ತಾಂತ್ರಿಕ ಶಿಕ್ಷಣ ವ್ಯವಸ್ಥೆ ಹಾಗೂ ಸಾಫ್ಟ್ವೇರ್ ವಲಯ ಅಂತರರಾಷ್ಟ್ರೀಯಮಟ್ಟದಲ್ಲಿ ಖ್ಯಾತಿಗಳಿಸಿದೆ. ಹಿಮಾಚಲಯ ಪ್ರದೇಶಕ್ಕೂ ರಾಜ್ಯದ ತಂತ್ರಜ್ಞಾನದ ನೆರವಿನ ಅಗತ್ಯವಿದೆ ಎಂದು ಹಿಮಾಚಲಯ ಪ್ರದೇಶದ ತಾಂತ್ರಿಕ ಶಿಕ್ಷಣ ಸಚಿವ ರಾಜೇಶ್ ಧರಮಾನಿ ಹೇಳಿದರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ನಲ್ಲಿ ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರ ಜತೆ ಚರ್ಚೆ ನಡೆಸಿದ ನಂತರ ಅವರು ಮಾತನಾಡಿದರು.

ತಾಂತ್ರಿಕ ಶಿಕ್ಷಣದ ಅಭಿವೃದ್ಧಿಗೆ ಕರ್ನಾಟಕ ಉನ್ನತ ಶಿಕ್ಷಣ ಇಲಾಖೆ ಕೈಗೊಂಡಿರುವ ಕ್ರಮಗಳು ಉತ್ತಮವಾಗಿವೆ. ಇಂತಹ ಪ್ರಯೋಗಗಳನ್ನು ಹಿಮಾಚಲಪ್ರದೇಶದಲ್ಲೂ ಅಳಡಿಸಿಕೊಳ್ಳಲಾಗುವುದು. ಕರ್ನಾಟಕದ ನೆರವಿನೊಂದಿಗೆ ಅಲ್ಲಿನ ತಂತ್ರಜ್ಞಾನ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದರು.

ಎಂ.ಸಿ.ಸುಧಾಕರ್ ಮಾತನಾಡಿ, ಹಿಮಾಚಲಪ್ರದೇಶದ ತಾಂತ್ರಿಕ ಶಿಕ್ಷಣ ಉನ್ನತೀಕರಣ ಹಾಗೂ ಅಭಿವೃದ್ಧಿಗೆ ರಾಜ್ಯ ಉನ್ನತ ಶಿಕ್ಷಣ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ತಾಂತ್ರಿಕ ಶಿಕ್ಷಣದ ಅಭಿವೃದ್ಧಿಗೆ ಇಲಾಖೆ ಮಾಡಿಕೊಂಡ ಒಪ್ಪಂದಗಳು, ತೆಗೆದುಕೊಂಡ ಕ್ರಮ, ಅನುಷ್ಠಾನಗೊಂಡ ಯೋಜನೆಗಳ ಸಂಪೂರ್ಣ ಮಾಹಿತಿ ಒದಗಿಸಲಾಗಿದೆ ಎಂದರು.

ಇಲಾಖೆ ಆಯುಕ್ತ ಜಿ. ಜಗದೀಶ್, ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್. ಪ್ರಸನ್ನ, ಉನ್ನತ ಶಿಕ್ಷಣ ಪರಿಷತ್ ಕಾರ್ಯನಿರ್ವಾಹಕ ನಿರ್ದೇಶಕ ಚಂದ್ರಶೇಖರ್ ಉಪಸ್ಥಿತರಿದ್ದರು.

ಶರಣಪ್ರಕಾಶ ಪಾಟೀಲ–ಧರ್ಮಾನಿ ಭೇಟಿ

ವಿಕಾಸಸೌಧದಲ್ಲಿ ವೈದ್ಯಕೀಯ ಶಿಕ್ಷಣ ಕೌಶಲಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ ಅವರೊಂದಿಗೆ ಧರ್ಮಾನಿ ಸಮಾಲೋಚನೆ ನಡೆಸಿದರು. ಯುಎಇ ವಿವಿಧ ಯುರೋಪಿಯನ್ ರಾಷ್ಟ್ರಗಳು ಮತ್ತು ಜಪಾನ್ನಂತಹ ದೇಶಗಳಲ್ಲಿ ಚಾಲಕರು ದಾದಿಯರು ತಂತ್ರಜ್ಞರಂತಹ ನುರಿತ ಕಾರ್ಮಿಕರನ್ನು ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ಪರಿಚಯಿಸುವಲ್ಲಿ ಪ್ರಮುಖ ಪಾತ್ರವಹಿಸಿರುವ ಕರ್ನಾಟಕದ ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮಾಹಿತಿ ಪಡೆದರು. ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ (ಕೆಎಸ್ಡಿಸಿ) ಅಧ್ಯಕ್ಷ ಕಾಂತಾನಾಯ್ಕ್ ಕರ್ನಾಟಕ ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಸ್.ಇ. ಸುಧೀಂದ್ರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.