ಬೆಂಗಳೂರು; ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳ ಹೆಚ್ಚಿದ್ದು, ಬಿಸಿಗಾಳಿ ಬೀಸುತ್ತಿದೆ. ಈ ಹಿನ್ನೆಲೆ, ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ ಸಾರ್ವಜನಿಕರಿಗೆ ಸಲಹೆ ನೀಡಿ ಕೆಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಐಎಂಡಿ ಮತ್ತು ಬೆಂಗಳೂರು ಹವಾಮಾನ ಕೇಂದ್ರ ರಾಜ್ಯದಲ್ಲಿ ಐದು ದಿನ ಬಿಸಿಗಾಳಿಯ ಎಚ್ಚರಿಕೆ ನೀಡಿದೆ, ಜತೆಗೆ ಬಾಗಲಕೋಟೆ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ತುಮಕೂರು, ಮಂಡ್ಯ, ಗದಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಕೇಂದ್ರದ ನಿರ್ದೇಶಕ ಸಿ. ಪಿ. ಪಾಟೀಲ್ ತಿಳಿಸಿದ್ದಾರೆ.

ಆರೆಂಜ್ ಅಲರ್ಟ್ ಎಂದರೆ ದೀರ್ಘಕಾಲದವರೆಗೆ ಬಿಸಿಲಿನಲ್ಲಿ ಇರುವ ಜನರಲ್ಲಿ ಮತ್ತು ಭಾರ ಎತ್ತುವ ಕೆಲಸ ಮಾಡುವವರಲ್ಲಿ ಶಾಖಾಘಾತದ ಲಕ್ಷಣಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ ಎನ್ನುವುದನ್ನು ಸೂಚಿಸುತ್ತದೆ ಎಂದು ಪಾಟೀಲ್ ಹೇಳಿದ್ದಾರೆ.

ಇನ್ನು, ಕರಾವಳಿ ಭಾಗದಲ್ಲಿ ಅತಿಯಾದ ಬಿಸಿ ಮತ್ತು ಒಣ ಹವೆಯ ವಾತಾವರಣ ಇರಲಿದೆ. ಹೀಗಾಗಿ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಬಿಸಿಲಿನಲ್ಲಿ ಓಡಾಡುವುದನ್ನು ತಪ್ಪಿಸುವುದು ಒಳಿತು. ಅಗತ್ಯವಾಗಿ ಹೊರಹೋಗಬೇಕೆಂದವರು ತಂಪು ಕನ್ನಡಕ, ಛತ್ರಿ, ಟೋಪಿಯಂತಹ ಸುರಕ್ಷತೆಯನ್ನು ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗರಿಷ್ಠ 37 ಮತ್ತು ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುವ ಸಾಧ್ಯತೆ ಇದೆ. ಏ. 29 ಮತ್ತು 30 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವೂ ಇದೆ ಎಂದು ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.