ಬೆಂಗಳೂರು: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಆಯ್ಕೆ ಕರಿತು ಚರ್ಚಿಸಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಇದೇ 28ರಂದು ಹಮ್ಮಿಕೊಂಡಿದ್ದ ಕಾರ್ಯಕಾರಿ ಸಮಿತಿ ಸಭೆಯನ್ನು ಮುಂದೂಡಲಾಗಿದೆ.

ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಚರ್ಚೆಯು ವಿವಾದದ ಸ್ವರೂಪ ತಾಳಿದ್ದರಿಂದ ಸಾಹಿತಿಗಳನ್ನೇ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲು ನಿರ್ಧರಿಸಿರುವ ಪರಿಷತ್ತು, ಈ ಬಗ್ಗೆ ಚರ್ಚೆಗೆ ತುರ್ತಾಗಿ ಅ.28ರಂದು ಕಾರ್ಯಕಾರಿ ಸಮಿತಿ ಸಭೆಯನ್ನು ಕರೆದಿತ್ತು. ಇಲ್ಲಿ ಒಮ್ಮತದ ಅಭಿಪ್ರಾಯ ವ್ಯಕ್ತವಾಗದಿದ್ದಲ್ಲಿ ಇನ್ನೊಂದು ಸಭೆ ನಡೆಸಿ, ಸಮ್ಮೇಳನಾಧ್ಯಕ್ಷರ ಹೆಸರನ್ನು ಘೋಷಿಸಲು ನಿರ್ಧರಿಸಿತ್ತು. ಆದರೆ, ಚುನಾವಣೆ ನೀತಿ ಸಂಹಿತೆಯ ಕಾರಣ ನೀಡಿ, ಸಭೆಯನ್ನು ಮುಂದೂಡಲಾಗಿದೆ ಎಂದು ಕಸಾಪ ಮೂಲಗಳು ತಿಳಿಸಿವೆ.

ಈ ಮೊದಲು ನ.12ರಂದು ಕಾರ್ಯಕಾರಿ ಸಮಿತಿ ಸಭೆ ನಿಗದಿಯಾಗಿತ್ತು. ಈ ಸಭೆಯಲ್ಲಿ ಸಮ್ಮೇಳನಾಧ್ಯಕ್ಷರ ಹೆಸರನ್ನು ಘೋಷಿಸುವುದಾಗಿ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.