ಹುಬ್ಬಳ್ಳಿ: ‘ಡಿ.ಕೆ. ಶಿವಕುಮಾರ್‌ದೇವ ಮಾನವನಲ್ಲ. ನಮ್ಮ ಹಾಗೇ ಮನುಷ್ಯ ಮತ್ತು ಲೀಡರ್. ನಮ್ಮ ಪಕ್ಷದಲ್ಲಿಯೂ ಸಮರ್ಥ ನಾಯಕರಿದ್ದಾರೆ’ ಎಂದು ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕಿಡಿಕಾರಿದರು.

ಕುಂದಗೋಳ ಉಪಚುನಾವಣೆ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಡಿಕೆಶಿ ಬಂದಿದ್ದಾರೆಂದು ನಾವು ಹೆದರಿಲ್ಲ. ನಮ್ಮಲ್ಲಿಯೂ ಅವರಗಿಂತ ಪ್ರಬಲ, ಸರಿಗಟ್ಟುವ ನಾಯಕರಿದ್ದಾರೆ. ಮುಂಬೈ ಕರ್ನಾಟಕದಲ್ಲಿ ನಾಯಕರ ಕೊರತೆ ಇಲ್ಲ. ಅವರಷ್ಟೇ ಶಕ್ತಿ, ಯುಕ್ತಿ ಇರುವವರು ಈ ಭಾಗದಲ್ಲಿ ಇದ್ದಾರೆ’ ಎಂದರು.

ಈಗಾಗಲೇ ಕುಂದಗೋಳ ಕ್ಷೇತ್ರದಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಮೊದಲ ಸುತ್ತಿನ ಮತಯಾಚನೆ ಮುಂದುವರಿಸಿದ್ದಾರೆ. ಈ ಕ್ಷೇತ್ರದಲ್ಲಿ ಶೇ.100ಕ್ಕೆ ನೂರರಷ್ಟು ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು.

ಮೇ 23ರ ಬಳಿಕ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ
ಹುಬ್ಬಳ್ಳಿ: ಮೇ 23ರ ಬಳಿಕ ರಾಜ್ಯ ರಾಜಕೀಯದಲ್ಲಿ ಅನೇಕ ಬದಲಾವಣೆಗಳಾಗಲಿದ್ದು, ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಕುಂದಗೋಳ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ಪರ ಪ್ರಚಾರದ ವೇಳೆ ಅವರು ಸುದ್ದಿಗಾರರೊಂದಿಗೆಮಾತನಾಡಿದರು.

ಕ್ಷೇತ್ರದಲ್ಲಿ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕುಂದಗೋಳ ಹಾಗೂ ಚಿಂಚೊಳಿಯಲ್ಲಿ ಬಿಜೆಪಿ ಜಯಭೇರಿ ಭಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.