ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ (ವಿಎಒ) ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಲಿಖಿತ ಪರೀಕ್ಷೆ ಸುಗಮವಾಗಿ ನಡೆದಿದೆ. ಶೇ 80 ರಷ್ಟು ಮಂದಿ ಹಾಜರಾಗಿದ್ದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದಾದ್ಯಂತ ಒಟ್ಟು 1,173 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದರು ಎಂದು ವಿವರಿಸಿದರು.

ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳನ್ನು ಅತಿ ಸೂಕ್ಷ್ಮ ಎಂದು ಪರಿಗಣಿಸಿದ್ದು, ಆ ಜಿಲ್ಲೆಗಳಲ್ಲಿ ಹೆಚ್ಚಿನ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿತ್ತು ಎಂದೂ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.