ಬೆಂಗಳೂರು: ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಬಂಧಿಸಲಾಗಿರುವ ಎಚ್.ಡಿ.ರೇವಣ್ಣ ಅವರನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲು ಎಸ್ಐಟಿ ಅಧಿಕಾರಿಗಳು ಹೊರಟಿದ್ದು, ಇದಕ್ಕೂ ಮುನ್ನ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಅರಮನೆ ರಸ್ತೆಯಲ್ಲಿರುವ ಎಸ್ಐಟಿ ಕಚೇರಿಯಿಂದ ರೇವಣ್ಣ ಅವರನ್ನು ಬೌರಿಂಗ್ ಆಸ್ಪತ್ರೆಗೆ ಪೊಲೀಸ್ ವಾಹನದಲ್ಲಿ ಕರೆತರಲಾಯಿತು. ವಾಹನದಿಂದ ಇಳಿದು ಆಸ್ಪತ್ರೆಗೆ ಹೊರಟಿದ್ದ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ರೇವಣ್ಣ, ‘ಯಾವುದೇ ಪುರಾವೆ ಇಲ್ಲದೇ ದುರುದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ಇದು ಸುಳ್ಳು ಪ್ರಕರಣ. ರಾಜಕೀಯ ಷಡ್ಯಂತ್ರ ಇದರ ಹಿಂದಿದೆ’ ಎಂದರು.

ವೈದ್ಯಕೀಯ ಪರೀಕ್ಷೆ ಬಳಿಕ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ನ್ಯಾಯಾಧೀಶರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಕರೆದೊಯ್ಯಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.