ಬೆಂಗಳೂರು: ‘ಮನುಷ್ಯನ ಬಣ್ಣದ ಬಗ್ಗೆ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿರುವುದು ಘೋರ ಅಪರಾಧ. ಅವರು ಕ್ಷಮೆ ಕೇಳಿದರೆ ಉಪಯೋಗವಿಲ್ಲ. ಅವರಿಂದ ರಾಜೀನಾಮೆ ಪಡೆಯಬೇಕು’ ಎಂದು ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ ಆಗ್ರಹಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಬಿಜೆಪಿಯ ಯಾವುದೇ ನಾಯಕರು ಆರಗ ಜ್ಞಾನೇಂದ್ರ ಅವರ ಈ ಹೇಳಿಕೆಯನ್ನು ಏಕೆ ಖಂಡಿಸುತ್ತಿಲ್ಲ. ಅವರ ಮನಸ್ಸಿನಲ್ಲಿಯೂ ಅದೇ ಆಲೋಚನೆ ಇದೆಯೇ’ ಎಂದು ಪ್ರಶ್ನಿಸಿದರು.

‘ಮಲ್ಲಿಕಾರ್ಜುನ ಖರ್ಗೆ ಮತ್ತು ಈಶ್ವರ ಖಂಡ್ರೆ ಅವರ ಬಗ್ಗೆ ಹಗುರವಾಗಿ ಮಾತನಾಡುವ ಜೊತೆಗೆ ಬಣ್ಣದ ಬಗ್ಗೆಯೂ ಅವಹೇಳನ ಮಾಡಿದ್ದಾರೆ. ಇದಕ್ಕಿಂತ ದೊಡ್ಡ ಅಪರಾಧ ಇನ್ನಿಲ್ಲ. ಈ ವಿಚಾರದಲ್ಲಿ ವಿಷಾದ ವ್ಯಕ್ತಪಡಿಸುವುದು ಬೇಕಿಲ್ಲ. ನೇರವಾಗಿ ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಮತ್ತು ಮಾನನಷ್ಟ ಮೊಕದ್ದಮೆ ಹೂಡಲಾಗುವುದು’ ಎಂದೂ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.