ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿರುವಂತೆ ದೇವದಾರಿ ಗಣಿಗಾರಿಕೆಗಾಗಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಅರಣ್ಯ ಇಲಾಖೆಗೆ ₹500 ಕೋಟಿ ಪಾವತಿಸಿಲ್ಲ. ಅರಣ್ಯ ಇಲಾಖೆಗೆ ಕಟ್ಟಬೇಕಾದ ಬಾಕಿಯೇ ₹1,400 ಕೋಟಿ ಇದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಈ ಹಿಂದೆ ಕುದುರೆಮುಖದಲ್ಲಿ ಗಣಿಗಾರಿಕೆ ನಡೆಸಿದ್ದ ಕೆಐಒಸಿಎಲ್ ಪರಿಸರಕ್ಕೆ ಮಾಡಿರುವ ಹಾನಿಯ ಮೊತ್ತ ಪಾವತಿಸಿಲ್ಲ. ಅಕ್ರಮವಾಗಿ ಲಕ್ಯಾ ಜಲಾಶಯದ ಎತ್ತರ ಹೆಚ್ಚಿಸಿ, ಅರಣ್ಯ ಮುಳುಗಡೆ ಮಾಡಿದ್ದಕ್ಕಾಗಿ ₹119.12 ಕೋಟಿ, ಗಣಿಗಾರಿಕೆಗಾಗಿ ಹೊಸ ಭೂಮಿ ಅಗೆದಿದ್ದಕ್ಕಾಗಿ ₹19.88 ಕೋಟಿ ಸೇರಿದಂತೆ ಮಹಾ ಲೆಕ್ಕಪರಿಶೋಧಕರು ಉಲ್ಲೇಖಿಸಿರುವ ಮೊತ್ತ ಹಾಗೂ ಬಡ್ಡಿ ₹1,349.52 ಕೋಟಿ ಬಾಕಿ ಇದೆ ಎಂದರು.

ಕೆಐಒಸಿಎಲ್ ತನ್ನ ಸ್ವಂತ ಭೂಮಿ 114.30 ಹೆಕ್ಟೇರ್, ಸರ್ಕಾರದ ಕಂದಾಯ ಭೂಮಿ 1,220.03 ಹೆಕ್ಟೇರ್ ಸೇರಿ ಒಟ್ಟು 1334.33 ಹೆಕ್ಟೇರ್ ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕು. 670 ಹೆಕ್ಟೇರ್ ಪ್ರದೇಶವನ್ನು ಅಂಕೋಲ-ಹುಬ್ಬಳ್ಳಿ ರೈಲು ಮಾರ್ಗಕ್ಕೆ ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಂಪನಿ ಗಣಿ ಉತ್ಖನನ ಆರಂಭಿಸಿದ ವೇಳೆ ಶೇ 27ರಷ್ಟು ಮಣ್ಣನ್ನು ಲಕ್ಯಾ ಡ್ಯಾಂಗೆ ಸುರಿದಿತ್ತು. ಪ್ರಸ್ತುತ ಅಲ್ಲಿ 1,500 ಟನ್ ಮಣ್ಣು ಸಂಗ್ರಹವಾಗಿದೆ. ಅಣೆಕಟ್ಟೆಯಲ್ಲಿ ಇನ್ನೂ ಹೆಚ್ಚಿನ ಮಣ್ಣು ಹಾಕಲು ಅನಧಿಕೃತವಾಗಿ ಕಂಪನಿ ಲಕ್ಯಾ ಡ್ಯಾಂ ಎತ್ತರವನ್ನು ಹೆಚ್ಚಿಸಿದ್ದರಿಂದ 340 ಹೆಕ್ಟೇರ್ ಅರಣ್ಯಕ್ಕೆ ಹಾನಿಯಾಗಿದೆ. ಪರಿಷ್ಕರಿಸಿದ ಅದಿರನ್ನು ಮಂಗಳೂರು ಬಂದರಿಗೆ ಸಾಗಿಸಲು ಅನುಮತಿ ಪಡೆಯದೇ ಪೈಪ್ಲೈನ್ ಅಳವಡಿಸಲಾಗಿದೆ ಎಂದರು.

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಎನ್ಎಂಡಿಸಿ ಹಾಗೂ ಖಾಸಗಿ ಕಂಪನಿಗಳಿಂದ ಅದಿರು ಖರೀದಿಸಬಹುದು. ಪರಿಸರ ಉಳಿಸಲು ಇಂತಹ ನಿರ್ಧಾರ ಕೈಗೊಳ್ಳಲಾಗಿದೆ. ಎಚ್.ಡಿ. ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.