*ಕೊಡಗು ಜಿಲ್ಲೆ:ಮರ ಕಡಿಯುವುದನ್ನು ನಿಲ್ಲಿಸಲು ಸೂಚನೆ* ಕೊಡಗು ಜಿಲ್ಲೆಯಲ್ಲಿ 800 ಮರಗಳನ್ನು ಕಡಿಯುವ ಬಗ್ಗೆ ಮಾಧ್ಯಮಗಳಲ್ಲಿ ಬಿತ್ತರವಾಗಿರುವ ವರದಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದೇ ಮರಗಳನ್ನು ಕಡಿಯುವುದನ್ನು ನಿಲ್ಲಿಸಿ, ವರದಿಯನ್ನು ನೀಡುವಂತೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ