ಮಡಿಕೇರಿ: ಇದೇ 10ರಂದು ನಡೆಯಲಿರುವ ಟಿಪ್ಪು ಜಯಂತಿ ವಿರೋಧಿಸಿ ಕೊಡಗು ಜಿಲ್ಲೆಯಲ್ಲಿ ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ.

‘ಜಿಲ್ಲೆಯ ಮೂರು ತಾಲ್ಲೂಕಿನಲ್ಲೂ ಬಂದ್ ನಡೆಯಲಿದೆ. ಆಟೊ ಚಾಲಕರು, ಖಾಸಗಿ ಬಸ್ ಹಾಗೂ ಅಂಗಡಿ ಮಾಲೀಕರು ಬಂದ್‌ಗೆ ಸಹಕಾರ ನೀಡುವ ವಿಶ್ವಾಸವಿದೆ’ ಎಂದು ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿಯ ಜಿಲ್ಲಾ ಸಂಚಾಲಕ ಅಭಿಮನ್ಯು ಕುಮಾರ್ ಸೋಮವಾರಪೇಟೆಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಸೋಮವಾರಪೇಟೆ ಮತ್ತು ವಿರಾಜಪೇಟೆಯಲ್ಲಿ ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಶುಕ್ರವಾರ ಮಡಿಕೇರಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. 10ರಂದೂ ಶಾಂತಿಯುತ ಪ್ರತಿಭಟನೆ ನಡೆಸಿ ‘ಕರಾಳ ದಿನ’ ಆಚರಣೆ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.

2015ರಲ್ಲಿ ಜಿಲ್ಲೆಯಲ್ಲಿ ನಡೆದಿದ್ದ ಟಿಪ್ಪು ಜಯಂತಿಯು ಕಹಿ ಘಟನೆಗೆ ಸಾಕ್ಷಿಯಾಗಿತ್ತು. ಇಬ್ಬರು ಮೃತಪಟ್ಟಿದ್ದರು. 2016 ಹಾಗೂ 2017ರಲ್ಲೂ ಕೊಡಗಿನಲ್ಲಿ ವಿರೋಧ ವ್ಯಕ್ತವಾಗಿತ್ತು. ಈ ಬಾರಿಯೂ ಮತ್ತೆ ಅದೇ ವಿರೋಧ ಎದ್ದಿದ್ದು ವ್ಯಾಪಕ ಬಂದೋಬಸ್ತ್ ಮಾಡಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.