ಬೆಂಗಳೂರು:ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ನ್ಯಾಯಪೀಠ ಗುರುವಾರ ತಡೆ ನೀಡಿದೆ.

ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಚಂದ್ರಶೇಖರ ಶೆಟ್ಟಿ ಮತ್ತು ಸದಸ್ಯ ಗಣೇಶ್ ಕಿಣಿ ಸಲ್ಲಿಸಿದ್ದ ಮೇಲ್ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸ್ಥಾನದಲ್ಲಿ ಚಂದ್ರಶೇಖರ ಶೆಟ್ಟಿ ಮತ್ತು ಸದಸ್ಯ ಸ್ಥಾನದಲ್ಲಿ ಗಣೇಶ್ ಕಿಣಿ ಮುಂದುವರಿಯಬಹುದು. ಅವರು ಸಮಿತಿಯು ಸಭೆ ಹಾಗೂ ದೈನಂದಿನ ಚಟುವಟಿಕೆಗಳನ್ನು ನಡೆಸಬಹುದು. ಆದರೆ, ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿಗೆ ಮೇಲ್ಮನವಿದಾರರು ಮತದಾನ ಮಾಡುವಂತಿಲ್ಲ’ ಎಂದು ನ್ಯಾಯಪೀಠ ಮಧ್ಯಂತರ ಆದೇಶ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.