ಬೆಂಗಳೂರು: ಕೋವಿಡ್–19 ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ‘ಸಪ್ತಪದಿ’ ಸಾಮೂಹಿಕ ವಿವಾಹ ಕಾರ್ಯವನ್ನು ಮುಂದೂಡಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಇದೇ 26 ರಂದು ಮೊದಲ ಹಂತದ ಸಪ್ತಪದಿ ಕಾರ್ಯಕ್ರಮ ನಡೆಯಬೇಕಿತ್ತು. ಇದಕ್ಕೆ 1,500 ವಧು– ವರರು ನೋಂದಣಿ ಮಾಡಿಕೊಂಡಿದ್ದರು. ಆದರೆ, ಈಗಿನ ಪರಿಸ್ಥಿತಿಯಲ್ಲಿ ಸಾಮೂಹಿಕ ವಿವಾಹ ನಡೆಸಲು ಸಾಧ್ಯವಿಲ್ಲ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೇ 26ಕ್ಕೆ ಎರಡನೇ ಹಂತದ ಸಪ್ತಪದಿ ನಡೆಯಬೇಕಾಗಿದೆ. ಆಗಲೇ ಒಟ್ಟಿಗೆ ನಡೆಸುವ ಉದ್ದೇಶವಿದೆ. ಈ ಬಗ್ಗೆ ಮುಖ್ಯಮಂತ್ರಿಯವರಲ್ಲಿ ಮಾತುಕತೆ ನಡೆಸಿದ್ದು, ಅದಕ್ಕೆ ಒಪ್ಪಿಗೆ ನೀಡಿದ್ದಾರೆ ಎಂದು ಅವರು ಹೇಳಿದರು.

ಕೊರೊನಾ ವೈರಸ್ ಹರಡುತ್ತಿರುವ ಕಾರಣ ‘ಎ’ ದರ್ಜೆಯ ಎಲ್ಲ ದೇವಸ್ಥಾನಗಳು ಬಂದ್ ಆಗಿವೆ. ವಿವಿಧ ದೇವಸ್ಥಾನಗಳಲ್ಲಿ ಕೆಲಸ ಮಾಡುತ್ತಿರುವ 37 ಸಾವಿರ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಇಲಾಖೆಯಿಂದ ವೇತನ ಪಡೆಯುತ್ತಿದ್ದ ಅರ್ಚಕರು,ಕಲಾವಿದರು ಮತ್ತು ಸ್ವಚ್ಛತಾ ಸಿಬ್ಬಂದಿಗೆ ಸಂಬಳ ನಿಲ್ಲಿಸದಂತೆ ಸೂಚನೆ ನೀಡಲಾಗಿದೆ. ಅರ್ಚಕರು ಸಂಕಷ್ಟದಲ್ಲಿ ಇದ್ದಾರೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.