ಮೂಡುಬಿದಿರೆ: ಬಿಲ್ಲವರ ಆರಾಧ್ಯ ದೈವಗಳಾದ ಕೋಟಿ ಚೆನ್ನಯರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಮಂಗಳವಾರ ಕೆಲ್ಲಪುತ್ತಿಗೆಯ ಪುರಾತನ ಕ್ಷೇತ್ರ ಭೂತರಾಜಗುಡ್ಡೆಯ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚಿಸಿದರು.

‘ನನ್ನಿಂದಾದ ತಪ್ಪಿಗೆ ಕೋಟಿ ಚೆನ್ನಯರ ಗರಡಿಯಲ್ಲಿ ಕ್ಷಮೆಯಾಚಿಸಿ, ತಪ್ಪು ಕಾಣಿಕೆ ಸಲ್ಲಿಸಿ ವಿವಾದಗಳಿಗೆ ಇತಿಶ್ರೀ ನೀಡಲು ನಿರ್ಧರಿಸಿದ್ದೇನೆ. ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ತೆರಳಿ, ಅವರಲ್ಲಿ ಕ್ಷಮೆಯಾಚಿಸುತ್ತೇನೆ. ಕುದ್ರೋಳಿ, ಗೆಜ್ಜೆಗಿರಿ ಕ್ಷೇತ್ರಕ್ಕೆ ತೆರಳಿ ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಕೋರುತ್ತೇನೆ’ ಎಂದು ಜಗದೀಶ್ ಅಧಿಕಾರಿ ಹೇಳಿದ್ದಾರೆ.

3 ದಿನಗಳಲ್ಲಿ ಕ್ಷಮೆಯಾಚಿಸದಿದ್ದರೆ, ಜಗದೀಶ್ ಅಧಿಕಾರಿ ಮುಖಕ್ಕೆ ಮಸಿ ಬಳಿದವರಿಗೆ ₹1 ಲಕ್ಷ ಬಹುಮಾನ ಕೊಡುವುದಾಗಿ ಸೋಮವಾರ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಘೋಷಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.