ಬೆಂಗಳೂರು: ‘ಮೋದಿ ಅವರ ನೂರು ದಿನಗಳ ಕಾರ್ಯಕ್ರಮ ರಾಜಕೀಯ ತಂತ್ರದ ಭಾಗ’ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅಭಿಪ್ರಾಯಪಟ್ಟರು.

ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ನಾವು ಕೂಡಾ ರಾಜಕೀಯ ತಂತ್ರ ಹೊಂದಿದ್ದೇವೆ. ಪ್ರತಿಯೊಂದು ಪಕ್ಷವು ಒಂದೊಂದು ತಂತ್ರ ಅನುಸರಿಸುತ್ತವೆ’ ಎಂದರು.

‘ಲೋಕಸಭೆ ಚುನಾವಣೋತ್ತರ ಸಮೀಕ್ಷೆ ಸುಳ್ಳಾಗಲಿದೆ. ಇಂಡಿಯಾ ಒಕ್ಕೂಟ ಬಹುಮತ ಪಡೆದು ಕೇಂದ್ರದಲ್ಲಿ ಸರ್ಕಾರ ರಚಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಳೆ ಹಾನಿ ಪ್ರದೇಶಗಳಿಗೆ ಭೇಟಿ: ‘ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವಿರಾ’ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಖಂಡಿತವಾಗಿ ಭೇಟಿ ನೀಡುತ್ತೇನೆ. ಹೆಚ್ಚು ಮಳೆ ಸುರಿದು ತೊಂದರೆ ಉಂಟಾಗಿರುವ ಭಾಗಗಳನ್ನು ಪರಿಶೀಲಿಸಲಾಗುವುದು’ ಎಂದರು.

‘ಪರಿಷತ್ ಚುನಾವಣೆ ಮತದಾನ ಮುಗಿದ ನಂತರ ಅಧಿಕಾರಿಗಳ ಸಭೆ ನಡೆಸಲಾಗುವುದು. ತೊಂದರೆಗಳನ್ನು ನಿವಾರಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.