ಬೆಂಗಳೂರು: 'ಸೇವಾದಳದ ಶತಮಾನೋತ್ಸವ ಮತ್ತು ರಾಜ್ಯ ಮಟ್ಟದ ಸಮಾವೇಶ ನಗರದ ಅರಮನೆ ಮೈದಾನದಲ್ಲಿ ಇದೇ 9ರಂದು ನಡೆಯಲಿದೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, 'ರಾಷ್ಟ್ರೀಯ ಸೇವಾದಳದ ಅಧ್ಯಕ್ಷ ಲಾಲ್ ಜಿ ಅವರು ಧ್ವಜಾರೋಹಣ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಸಚಿವರುಗಳು ಪಕ್ಷದ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ' ಎಂದರು.

'ಇದೇ ತಿಂಗಳ 28ರಂದು ಸೇವಾದಳ ನೂರು ವರ್ಷಗಳನ್ನು ಪೂರೈಸಲಿದ್ದು, ಈ ಹಿನ್ನೆಲೆಯಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಆ ಮೂಲಕ ಸೇವಾದಳದ ಇತಿಹಾಸದ ಬಗ್ಗೆ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಈ ಕಾರ್ಯಕ್ರಮದಲ್ಲಿ ಸೇವಾದಳದ 3 ಸಾವಿರ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ' ಎಂದೂ ತಿಳಿದರು.

"ಮುಂದಿನ ದಿನಗಳಲ್ಲಿ ಸೇವಾದಳ ಯಾವ ರೀತಿ ಕೆಲಸ ಮಾಡಬೇಕು, ಲೋಕಸಭೆ ಚುನಾವಣೆ ಹಾಗೂ ಪಕ್ಷ ಸಂಘಟನೆ ಮಾಡಬೇಕು ಎಂದು ಕಾರ್ಯಕ್ರಮದಲ್ಲಿ ಚರ್ಚೆಯಾಗಲಿದೆ ಎಂದರು.

ಜನವರಿ 2ನೇ ವಾರದಲ್ಲಿ ಲೋಕಸಭೆ ಅಭ್ಯರ್ಥಿಗಳ ಘೋಷಣೆ:

'ಇನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲೆಗಳಿಗೆ ಸಚಿವರುಗಳನ್ನು ನಿಯೋಜನೆ ಮಾಡಲಾಗಿದ್ದು, ಶೇ 75ರಷ್ಟು ಸಚಿವರು ಜಿಲ್ಲೆಗಳಲ್ಲಿ ಸಭೆ ಮಾಡಿದ್ದಾರೆ. ಒಂದು ವಾರಗಳಲ್ಲಿ ಮಂತ್ರಿಗಳು ಹಾಗೂ ವೀಕ್ಷಕರುಗಳು ಲೋಕಸಭೆ ಚುನಾವಣೆಯ ಸಂಭಾವ್ಯ ಅಭ್ಯರ್ಥಿ ಕುರಿತು ವರದಿ ಸಲ್ಲಿಸುವಂತೆ ಕೆಪಿಸಿಸಿ ಅಧ್ಯಕ್ಷರು ಸೂಚನೆ ನೀಡಿದ್ದಾರೆ. ನಂತರ ಕೆಪಿಸಿಸಿ ಅಧ್ಯಕ್ಷರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಅವರು ಚರ್ಚೆ ಮಾಡಿ ನಂತರ ಹೈಕಮಾಂಡ್ ಗೆ ವರದಿ ಸಲ್ಲಿಸಲಿದ್ದಾರೆ. ಜನವರಿ 2ನೇ ವಾರದಲ್ಲಿ ಲೋಕಸಭೆ ಅಭ್ಯರ್ಥಿಗಳ ಘೋಷಣೆ ಆಗಲಿದೆ' ಎಂದು ಸಲೀ ಹೇಳಿದರು.

'ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನಾವು ಲೋಕಸಭೆ ಚುನಾವಣೆ ತಯಾರಿ ಮಾಡಿದ್ದೇವೆ. ನಮ್ಮ ನಾಲ್ಕು ಗ್ಯಾರಂಟಿ ಯೋಜನೆಗಳು ಜಾರಿ ಆಗಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಪಕ್ಷ ಕನಿಷ್ಠ 20 ಸೀಟುಗಳನ್ನು ರಾಜ್ಯದಲ್ಲಿ ಗೆದ್ದು, ಕೇಂದ್ರದಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾದ ವ್ಯಕ್ತಪಡಿಸಿದರು.

ಕೇಂದ್ರ ಮಲತಾಯಿ ಧೋರಣೆ:

'ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ವಹಣೆಗೆ ₹ 17,900 ಕೋಟಿ ಪರಿಹಾರ ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದರೂ ಇದುವರೆಗೂ ಸ್ಪಂದನೆ ಸಿಕ್ಕಿಲ್ಲ. ರಾಜ್ಯದಿಂದ ಬಿಜೆಪಿಯ 25 ಸಂಸದರು ಆಯ್ಕೆ ಆಗಿದ್ದರೂ ಇಲ್ಲಿಯವರೆಗೂ ಹಣ ಬಿಡುಗಡೆ ಮಾಡಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯದವರೇ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ ಎಂಬ ಕಾರಣಕ್ಕೆ ಮಲತಾಯಿ ಧೋರಣೆ ತೋರುತ್ತಿದೆ. ಈ ವಿಚಾರದಲ್ಲಿ ರಾಜಕಾರಣ ಮಾಡದೇ ಪರಿಹಾರ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ' ಎಂದರು.

ಸೇವಾದಳದ ಅಧ್ಯಕ್ಷ ರಾಮಚಂದ್ರಪ್ಪ: ಮಾತನಾಡಿ, 'ಸೇವಾದಳ 1923ರಲ್ಲಿ ಸ್ಥಾಪನೆಯಾಗಿದ್ದು, ಹರ್ಡಿಕರ್ ಅವರು ಜೈಲಿನಲ್ಲಿ ಈ ಸಂಘಟನೆ ಆರಂಭಿಸಿದರು. ಆರಂಭದಲ್ಲಿ ಹಿಂದುಸ್ಥಾನಿ ಸೇವಾದಳ ಎಂದು ಸ್ಥಾಪನೆಯಾಗಿತ್ತು. 1930-31ರಲ್ಲಿ ಗಾಂಧಿಜಿ, ನೆಹರೂ ಸೇರಿದಂತೆ ಅನೇಕ ನಾಯಕರು ಸೇವಾದಳವನ್ನು ಕಾಂಗ್ರೆಸ್ ಗೆ ವಿಲೀನ ಮಾಡುತ್ತಾರೆ. ಅಲ್ಲಿಂದ ಇಲ್ಲಿಯವರೆಗೂ ಸೇವಾದಳ ಕಾಂಗ್ರೆಸ್ ವಿಭಾಗವಾಗಿ ಸಂಘಟನೆ ಮಾಡಿಕೊಂಡು ಬಂದಿದೆ' ಎಂದರು.

"ಬ್ರಿಟಿಷರ ಹಿಂಸೆ ತಾಳಲಾರದೆ ಹುಟ್ಟುಕೊಂಡ ಸಂಘಟನೆ ಇದಾಗಿದೆ. ಸ್ವಾತಂತ್ರ್ಯ ಪೂರ್ವದಿಂದ ಇಲ್ಲಿಯವರೆಗೂ ಸೇವಾದಳ ಬೆಳೆದುಕೊಂಡು ಬಂದಿದೆ. ನಾನು ಇದರ ಅಧ್ಯಕ್ಷನಾಗಿ ಎರಡು ವರ್ಷಗಳಾಗಿದ್ದು, ಈ ಅವಧಿಯಲ್ಲಿ ರಾಜ್ಯಮಟ್ಟದ ಜಿಲ್ಲಾಮಟ್ಟದ ಪದಾಧಿಕಾರಿಗಳನ್ನು ನೇಮಿಸಿದ್ದೇನೆ, ಈ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ಮಾಡಲು ರಾಷ್ಟ್ರೀಯ ಅಧ್ಯಕ್ಷರು ಹಾಗೂ ಎಐಸಿಸಿ ಅಧ್ಯಕ್ಷರು, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಈ ಕಾರ್ಯಕ್ರಮ ಮಾಡಲು ಸೂಚನೆ ನೀಡಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.