ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) 622 ಹುದ್ದೆಗಳ ನೇಮಕಾತಿಗೆ ಇದೇ ಫೆಬ್ರುವರಿ 18ರಂದು ನಡೆಸಲಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.

ಕೆಪಿಸಿಎಲ್ ಲಿಖಿತ ಸೂಚನೆಯಂತೆ ಕಳೆದ ಬಾರಿಯಂತೆಯೇ, ಪ್ರತಿ ಮೂರು ತಪ್ಪು ಉತ್ತರಕ್ಕೆ ಒಂದು ಅಂಕ ಕಡಿತಗೊಳಿಸುವ ಋಣಾತ್ಮಕ ಅಂಕ ಪದ್ಧತಿಯಂತೆ ಮೌಲ್ಯ ಮಾಪನ ಮಾಡಲಾಗಿದೆ. ಹುದ್ದೆವಾರು ಪರೀಕ್ಷೆ ಬರೆದ ಅಭ್ಯರ್ಥಿಗಳ ಅಂತಿಮ ಅಂಕಪಟ್ಟಿ ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.

ಅಂತಿಮ ಅಂಕಪಟ್ಟಿಯನ್ನು ಕೆಪಿಸಿಎಲ್ ಸಂಸ್ಥೆಗೆ ಹಸ್ತಾಂತರಿಸಲಾಗುವುದು. ನಿಯಮಾನುಸಾರ ಆಯ್ಕೆ ಪಟ್ಟಿ ಪ್ರಕಟಿಸಲು ಕೆಪಿಸಿಎಲ್ ಕ್ರಮ ವಹಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.