ಬೆಂಗಳೂರು: ಕೆಎಎಸ್ ಸೇರಿದಂತೆ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆಯನ್ನು ಜುಲೈ 7ರ ಬದಲು ಜುಲೈ 21ಕ್ಕೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ನಿರ್ಧರಿಸಿದೆ.

ಪೂರ್ವಭಾವಿ ಪರೀಕ್ಷೆಯನ್ನು ಮೇ 5ರಂದು ನಡೆಸಲು ಮೊದಲು ತೀರ್ಮಾನಿಸಲಾಗಿತ್ತು. ಲೋಕಸಭೆ ಚುನಾವಣೆ ಘೋಷಣೆಯಾದ ಕಾರಣ ನಂತರ ಜುಲೈ 7ಕ್ಕೆ ಮುಂದೂಡಲಾಗಿತ್ತು. ಆದರೆ, ಜುಲೈ 7ರಂದು ಕೇಂದ್ರ ಲೋಕಸೇವಾ ಆಯೋಗದ ಇಪಿಎಫ್‌ಒ ಪರೀಕ್ಷೆ ನಿಗದಿಯಾಗಿರುವುದರಿಂದ ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡುವಂತೆ ಕೆಪಿಎಸ್‌ಸಿಗೆ ಹಲವು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದರು.

‘ಅಭ್ಯರ್ಥಿಗಳ ಮನವಿಯನ್ನು ಪರಿಗಣಿಸಿ ಪರೀಕ್ಷೆ ಮುಂದೂಡಲಾಗಿದೆ’ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಾಕೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.