ಬೆಂಗಳೂರು: ಕೋವಿಡ್ ಕಾರಣಕ್ಕೆ ಮುಂದೂಡಿದ್ದ ದ್ವಿತೀಯ ದರ್ಜೆ ಸಹಾಯ (ಎಸ್ಡಿಎ) ಹುದ್ದೆಗಳ ನೇಮಕಾತಿಗೆ ಸೆ. 18 ಮತ್ತು 19ರಂದು ಪರೀಕ್ಷೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಿರ್ಧರಿಸಿದೆ.

ರಾಜ್ಯದ ವಿವಿಧ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಹಾಗೂ ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರ, ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಫೆ. 29ರಂದು ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿತ್ತು. ಬಳಿಕ ಕೋವಿಡ್ ಕಾರಣಕ್ಕೆ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಸೆ.18ರಂದು ಬೆಳಿಗ್ಗೆ 10ರಿಂದ 11.30ರವರೆಗೆ ಪತ್ರಿಕೆ –1 ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. 19ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಅಂದು ಬೆಳಿಗ್ಗೆ 10ರಿಂದ 11.30ರವರೆಗೆ ಪತ್ರಿಕೆ-3 ಸಾಮಾನ್ಯ ಜ್ಞಾನ, ಮಧ್ಯಾಹ್ನ 2ರಿಂದ 3.30ರವರೆಗೆ ಪತ್ರಿಕೆ -2 ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್ ಪರೀಕ್ಷೆ ನಡೆಯಲಿದೆ.

ಸಂಪಾದಕೀಯ Podcast: ಕೆಪಿಎಸ್ಸಿ ನೇಮಕಾತಿ ಅಕ್ರಮಕ್ಕೆ ರಕ್ಷಣೆ ಬೇಡ | Prajavani

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.