ಬೆಂಗಳೂರು: ’ಬಿಬಿಎಂಪಿ ವ್ಯಾಪ್ತಿಯಲ್ಲಿ 2015–16ರಿಂದ 2021–22ರ ನಡುವೆ ವಿವಿಧ ಕಾಮಗಾರಿಗಳನ್ನು ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್) ಮೂಲಕ ನಿರ್ವಹಿಸಲಾಗಿದ್ದು, ₹12,944 ಕೋಟಿ ಅನುದಾನವನ್ನೂ ನಿಗಮಕ್ಕೆ ಬಿಡುಗಡೆ ಮಾಡಲಾಗಿದೆ. ಇವುಗಳಲ್ಲಿ ಶೇ 50ಕ್ಕೂ ಹೆಚ್ಚು ಕಾಮಗಾರಿಗಳು ನಡೆದೇ ಇಲ್ಲ. ಆದರೂ ಹಣ ಪಾವತಿಸಲಾಗಿದೆ’ ಎಂದು ಬಿಜೆಪಿಯ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಆರೋಪಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗೆ ಅವರು ದೂರು ಸಲ್ಲಿಸಿದ್ದಾರೆ.

‘ಕೆಆರ್‌ಐಡಿಎಲ್ ನಡೆಸಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ. ನಡೆಯದ ಕಾಮಗಾರಿಗೂ ಬಿಲ್ ಪಾವತಿಸಲಾಗಿದ್ದು, ಇದರಲ್ಲಿ 6 ಐಎಫ್‌ಎಸ್ ಅಧಿಕಾರಿಗಳು, 62 ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಬಗ್ಗೆ ಸಿಐಡಿಯಿಂದ ತನಿಖೆ ನಡೆಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

‘ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾಮಗಾರಿ ನಿರ್ವಹಣೆ ಮಾಡಬೇಕಿರುವ ಕೆಆರ್‌ಐಡಿಎಲ್ ಸಂಸ್ಥೆಗೆ ಬಿಬಿಎಂಪಿ ವ್ಯಾಪ್ತಿಯ ಕಾಮಗಾರಿಗಳನ್ನು ವಹಿಸಿರುವುದೇ ನಿಯಮಬಾಹಿರ’ ಎಂದು ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.