ನವದೆಹಲಿ: ಕೃಷ್ಣ ಜನ್ಮಾಷ್ಟಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಿಗೆ ಶುಭಾಶಯ ಕೋರಿದ್ದಾರೆ.

ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಹಲವಾರು ಗಣ್ಯರು ಶುಭಾಶಯ ಕೋರಿದ್ದಾರೆ.

ಜನ್ಮಾಷ್ಟಮಿಯ ಈ ದಿನ ನಿಮ್ಮೆಲ್ಲರಿಗೂ ಶುಭಾಶಯಗಳು. ಈ ಶುಭ ಸಂದರ್ಭದಲ್ಲಿ ನನ್ನ (ದೇಶದ) ಕುಟುಂಬದ ಎಲ್ಲ ಸದಸ್ಯರ ಜೀವನದಲ್ಲಿ ಹೊಸ ಶಕ್ತಿ ಮತ್ತು ನವ ಉತ್ಸಾಹವನ್ನು ತುಂಬಲಿ. ಜೈ ಶ್ರೀ ಕೃಷ್ಣ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಭ ಕೋರಿದ್ದಾರೆ.

ಜನ್ಮಾಷ್ಟಮಿಯಂದು ನಿಮ್ಮೆಲ್ಲರಿಗೂ ಶುಭಾಶಯಗಳು. ಈ ಹಬ್ಬವು ಶ್ರೀಕೃಷ್ಣನ ಗೀತೆಯ ಬೋಧನೆಗಳನ್ನು ಅರ್ಥಮಾಡಿಕೊಳ್ಳಲು, ಅವುಗಳನ್ನು ಕಾರ್ಯಗತಗೊಳಿಸಲು ಮತ್ತು ನಿಸ್ವಾರ್ಥ ಕೆಲಸ ಮಾಡಲು ನಮ್ಮನ್ನು ಪ್ರೇರೇಪಿಸುತ್ತದೆ. ಕೃಷ್ಣನು ಇಡೀ ಮನುಕುಲಕ್ಕೆ ಧರ್ಮದ ಮಾರ್ಗವನ್ನು ಅನುಸರಿಸುವ ಸಂದೇಶ ನೀಡಿದ್ದಾನೆ. ಈ ಶುಭ ಸಂದರ್ಭದಲ್ಲಿ, ನಮ್ಮ ಸಮಾಜ ಮತ್ತು ರಾಷ್ಟ್ರವನ್ನು ಸಮೃದ್ಧಗೊಳಿಸುವ ಕೆಲಸ ಮಾಡೋಣ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಶುಭ ಕೋರಿದ್ದಾರೆ.

ಶ್ರೀ ಕೃಷ್ಣನ ಬದುಕು ಮತ್ತು ಸಾಧನೆಯ ಸಂದೇಶಗಳಾದ ಸತ್ಯ, ಕರುಣೆ, ಪ್ರೀತಿ - ಬಾಂಧವ್ಯದ ಮಾನವೀಯ ಮೌಲ್ಯಗಳ ಹಾದಿಯಲ್ಲಿ ನಮ್ಮ ಧಾರ್ಮಿಕ ಚಿಂತನೆಗಳು ಸಾಗಲಿ. ಅಧರ್ಮವು ಅಳಿದು ಧರ್ಮದ ಬೆಳಕು ಎಲ್ಲೆಡೆ ಬೆಳಗಲಿ ಎಂದು ಹಾರೈಸುತ್ತೇನೆ. ನಾಡಿನ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿನ್ನೆ ಶುಭ ಕೋರಿದ್ದರು.

ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಹಾರ್ದಿಕ ಶುಭಾಶಯಗಳು. ಪರಮಾತ್ಮನು ಶ್ರೀಮದ್ ಭಗವದ್ಗೀತೆಯಲ್ಲಿ ಸಾರಿದ ಜೀವನ ಸಂದೇಶವನ್ನು ಪಾಲಿಸುತ್ತಾ ಧರ್ಮದ ಹಾದಿಯಲ್ಲಿ ಸಾಗೋಣ. ನಾಡಿನ ಜನತೆಯ ಮೇಲೆ ಶ್ರೀಕೃಷ್ಣನ ಅನುಗ್ರಹವಿರಲಿ. ಕೃಷ್ಣಂ ವಂದೇ ಜಗದ್ಗುರುಂ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿನ್ನೆ ಶುಭ ಕೋರಿದ್ದರು.

ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಆ ಕೃಷ್ಣ ಪರಮಾತ್ಮನು ಎಲ್ಲರಿಗೂ ಸುಖ ಶಾಂತಿ, ನೆಮ್ಮದಿ, ಸಮೃದ್ಧಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ಮುಖಂಡ ಕುಮಾರಸ್ವಾಮಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿನ್ನೆ ಶುಭ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.