ಬೆಳಗಾವಿ (ಸುವರ್ಣ ವಿಧಾನಸೌಧ): ಕಲಾಪದ ಮೊದಲದಿನವೇ ಶಾಸಕರ ನಿರಾಸಕ್ತಿ ಕಂಡು ಬಂದಿತು. ಕಲಾಪಕ್ಕೆ ಹಾಜರಾದ ಶಾಸಕರ ಸಂಖ್ಯೆ ಅತಿ ಕಡಿಮೆ. ಪುನಃ ಸಚಿವ ಸ್ಥಾನ ಸಿಗದೇ ಮುನಿಸಿಕೊಂಡಿರುವ ಬಿಜೆಪಿಯ ಕೆ.ಎಸ್.ಈಶ್ವರಪ್ಪ, ಬೆಳಗಾವಿ ಜಿಲ್ಲೆಯವರೇ ಆದ ರಮೇಶ್ ಜಾರಕಿಹೊಳಿ ಅವರು ವಿಧಾನಸೌಧದತ್ತ ಸುಳಿಯಲೇ ಇಲ್ಲ.

ಸಂತಾಪದ ಮುಗಿಯುವವರೆಗೂ ಕೋರಂಗೆ ಅಗತ್ಯವಿರುವಷ್ಟು ಶಾಸಕರು ಮಾತ್ರ ಹಾಜರಿದ್ದರು. ಬಹುಪಾಲು ಆಸನಗಳು ಖಾಲಿ ಉಳಿದಿದ್ದವು. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಈ ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದರಿಂದ ಜೆಡಿಎಸ್ ಶಾಸಕರ ಸಂಖ್ಯೆಯೂ ವಿರಳವಾಗಿತ್ತು.

ಬಿಜೆಪಿಯ ಹಿರಿಯ ಶಾಸಕ ಈಶ್ವರಪ್ಪ ಅವರು ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ತುರ್ತು ಮತ್ತು ಅನಿವಾರ್ಯ ಕಾರಣಗಳಿಂದ ಅಧಿವೇಶನದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.

ಆದರೆ, ಬಾಗಲಕೋಟೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಸಚಿವ ಸಂಪುಟಕ್ಕೆ ನನ್ನನ್ನು ತೆಗೆದುಕೊಳ್ಳದ್ದಕ್ಕೆ ಅಭಿಮಾನಿಗಳಿಗೆ ನೋವಾಗಿದೆ. ಇದು ನನಗೂ ನೋವುಂಟು ಮಾಡಿದೆ. ಆದ್ದರಿಂದ ಬೆಳಗಾವಿ ವಿಧಾನಮಂಡಲ ಅಧಿವೇಶನದಿಂದ ದೂರ ಉಳಿಯುತ್ತೇನೆ' ಎಂದು ಹೇಳಿದರು.

'ಜನರು ಫೋನ್ ಮಾಡಿ ನಿಮ್ಮನ್ನೇಕೆ ಸಂಪುಟಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ಇದರಿಂದ ಅಪಮಾನ ಆಗ್ತಿದೆ. ಇದನ್ನು ಅರ್ಥ ಮಾಡಿಸಲು ಸೌಜನ್ಯದ ಪ್ರತಿಭಟನೆ ಮಾಡುತ್ತಿದ್ದೇನೆ' ಎಂದು ಅಸಮಾಧಾನ ಹೊರಹಾಕಿದರು.

'ಬೆಳಗಾವಿಗೆ ಹೋಗ್ತೀನಿ. ಆದರೆ, ಅಧಿವೇಶನಕ್ಕೆ ಹೋಗಲ್ಲ. ಸಭಾಧ್ಯಕ್ಷರಿಂದ ಅನುಮತಿ ಪಡೆಯಲು ಹೋಗುತ್ತಿದ್ದೇನೆ ಎಂದರು.

'ಇವತ್ತು, ನಾಳೆ ನಿಮ್ಮನ್ನ ಸಚಿವರನ್ನ ಮಾಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳುತ್ತಲೇ ಇದ್ದಾರೆ. ಯಾವ ಕಾರಣಕ್ಕೆ ತೆಗೆದುಕೊಳ್ಳುತ್ತಿಲ್ಲ ಗೊತ್ತಿಲ್ಲ' ಎಂದರು.

ರಮೇಶ್ ಜಾರಕಿಹೊಳಿ ಅವರೂ ತಮ್ಮನ್ನು ಸಚಿವರನ್ನಾಗಿ ಮಾಡದ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದು, ಅವರು ಈ ಬಾರಿ ಕಲಾಪಕ್ಕೆ ಹಾಜರಾಗುವ ಸಾಧ್ಯತೆ ಕಡಿಮೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.