ಶಿವಮೊಗ್ಗ: ದೇಶ ಒಡೆಯುವ ಹೇಳಿಕೆ ನೀಡುವ ರಾಷ್ಟ್ರದ್ರೋಹಿಗಳನ್ನು ಗುಂಡಿಟ್ಟು ಕೊಲ್ಲುವ ಕಾನೂನು ಜಾರಿಗೆ ತರುವಂತೆ ಹೇಳಿದ್ದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಫೆ15 ರಂದು ವಿಚಾರಣೆಗೆ ಹಾಜರಾಗುವಂತೆ ದಾವಣಗೆರೆ ಪೊಲೀಸರು ನೊಟೀಸ್ ನೀಡಿದ್ದಾರೆ.

ಈಶ್ವರಪ್ಪ ಹೇಳಿಕೆ ಹಿನ್ನೆಲೆಯಲ್ಲಿ ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

ಶಿವಮೊಗ್ಗದ ಗುಂಡಪ್ಪ ಶೆಡ್ ನ ಮಲ್ಲೇಶ್ವರ ಬಡಾವಣೆಯಲ್ಲಿರುವ ಈಶ್ವರಪ್ಪ ಅವರ ನಿವಾಸಕ್ಕೆ ಬಂದ ದಾವಣಗೆರೆಯ ಬಡಾವಣೆ ಠಾಣೆ ಪಿಎಸ್ಐ ಲತಾ ನೋಟೀಸ್ ನೀಡಿದ್ದಾರೆ.

ಫೆಬ್ರುವರಿ 15ರಂದು ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಗೆ ಬಂದು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನಲ್ಲಿ ಉಲ್ಲೇಖಿಸಿದ್ದಾರೆ.
.ಪ್ರಚೋದನಕಾರಿ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು.ಗುಂಡಿಕ್ಕಿ ಕೊಲ್ಲಿ ಹೇಳಿಕೆ: KS ಈಶ್ವರಪ್ಪ ವಿರುದ್ಧ ಕಿಡಿಕಾರಿದ ಕಾಂಗ್ರೆಸ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.