ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತ (ಕೆಎಸ್‌ಡಿಎಲ್) 2023 ರ ಡಿಸೆಂಬರ್ ತಿಂಗಳಿನಲ್ಲಿ ₹123.42 ಕೋಟಿ ಮೌಲ್ಯದ 852 ಟನ್ ಮಾರ್ಜಕಗಳನ್ನು ಉತ್ಪಾದಿಸಿದ್ದು, ಕಳೆದ 40 ವರ್ಷಗಳಲ್ಲಿ ಇದು ಸಾರ್ವಕಾಲಿಕ ದಾಖಲೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, 2022 ರ ಸೆಪ್ಟೆಂಬರ್‌ನಲ್ಲಿ 775 ಟನ್ ಮಾರ್ಜಕ ಉತ್ಪಾದನೆ, ಈ ಹಿಂದಿನ ದಾಖಲೆಯಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಕೆಎಸ್‌ಡಿಎಲ್‌ನಲ್ಲಿ ಇದುವರೆಗೆ ಮಾರ್ಜಕ ಉತ್ಪಾದನಾ ವಿಭಾಗದಲ್ಲಿ ಒಂದು ಪಾಳಿಯ ಕೆಲಸದ ವ್ಯವಸ್ಥೆ ಇತ್ತು. ಅದನ್ನೀಗ ಮೂರು ಪಾಳಿಗಳಿಗೆ ವಿಸ್ತರಿಸಲಾಗಿದೆ. ಜೊತೆಗೆ ಈವರೆಗೆ ಸಂಸ್ಥೆಯಲ್ಲಿ ಮಾರ್ಜಕಗಳ ತಯಾರಿಕೆಗೆ ಕೇವಲ ಒಂದು ಯಂತ್ರ ಮಾತ್ರ ಇತ್ತು. ಸರ್ಕಾರಿ ಉದ್ದಿಮೆಗಳು ಖಾಸಗಿ ವಲಯದಂತೆಯೇ ಲಾಭ ಗಳಿಸಬೇಕೆಂಬ ಉದ್ದೇಶದಿಂದ ಈ ವಿಭಾಗದಲ್ಲಿ ಮೂರು ಯಂತ್ರಗಳನ್ನು ಅಳವಡಿಸಲಾಗಿದೆ ಎಂದು ವಿವರಿಸಿದ್ದಾರೆ.

ಈ ಹಿಂದಿನ ವರ್ಷಕ್ಕೆ ಹೋಲಿಸಿದರೆ 2023–24 ನೇ ಹಣಕಾಸು ವರ್ಷದಲ್ಲಿ ಡಿಸೆಂಬರ್ ಅಂತ್ಯದವರೆಗೆ ಸಾಬೂನು, ಮಾರ್ಜಕ ಮತ್ತು ಕಾಸ್ಮೆಟಿಕ್ಸ್ ಉತ್ಪಾದನೆ ನಿಗದಿತ ಗುರಿಗಿಂತ ಹೆಚ್ಚಾಗಿದೆ. ಸಂಸ್ಥೆಯು ಕಳೆದ ಸಾಲಿನಲ್ಲಿ ₹118 ಕೋಟಿ ಲಾಭ ಗಳಿಸಿತ್ತು. ಈ ಹಣಕಾಸು ಸಾಲಿನ 9 ತಿಂಗಳಲ್ಲಿ ಸಂಸ್ಥೆಯು ₹1,171.07 ಕೋಟಿ ಮೊತ್ತದಷ್ಟು ವಹಿವಾಟು ನಡೆಸಿದೆ. ಈ ವರ್ಷಕ್ಕೆ ಒಟ್ಟು ₹1,404 ಕೋಟಿ ವಹಿವಾಟು ಗುರಿ ನಿಗದಿ ಮಾಡಿದ್ದು, ಅದನ್ನು ಮೀರುವುದರಲ್ಲಿ ಅನುಮಾನವಿಲ್ಲ ಎಂದು ಪಾಟೀಲ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.