ಮೂಡಿಗೆರೆ: ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಕುಟುಂಬದವರಿಗೆ ಸಾಂತ್ವನ ಹೇಳಲು ಹೋದ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಹಲ್ಲೆ ನಡೆಸಿರುವುದು ಭಾನುವಾರ ನಡೆದಿದೆ.

ತಾಲ್ಲೂಕಿನ ಎಸ್ಟೇಟ್ ಕುಂದೂರಿನ ತೋಟದಲ್ಲಿ ಭಾನುವಾರ ಶೋಭಾ (45) ಎಂಬುವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅವರು ಮೃತಪಟ್ಟಿದ್ದಾರೆ. ವಿಷಯ ತಿಳಿದು ಸ್ಥಳೀಯರು ಘಟನಾ ಸ್ಥಳಕ್ಕೆ ಧಾವಿಸಿ ಬಂದಿದ್ದರು. ಸ್ವಲ್ಪ ಹೊತ್ತಿನಲ್ಲೇ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರೂ ಸ್ಥಳಕ್ಕೆ ಬಂದರು. ಆಗ ಉದ್ರಿಕ್ತರು ಅವರಿಗೆ ಘೇರಾವ್ ಹಾಕಿ ಆಕ್ರೋಶ
ವ್ಯಕ್ತಪಡಿಸಿದರು.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಪೊಲೀಸರು ಲಾಠಿ ಹಿಡಿದು ಉದ್ರಿಕ್ತರನ್ನು ಚದುರಿಸಿದರು. ಬಳಿಕ ಕುಮಾರಸ್ವಾಮಿ ಅವರನ್ನು ಅರಣ್ಯ ಇಲಾಖೆಯ ಜೀಪು ಹತ್ತಿಸಿದರು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಅಂಗಿ ಹರಿಯಿತು. ಉದ್ರಿಕ್ತ ಜನರು ಜೀಪನ್ನು ಸ್ವಲ್ಪ ದೂರದವರೆಗೆ ಹಿಂಬಾಲಿಸಿಕೊಂಡು ಹೋದರು.ಪೊಲೀಸರು ಜನರನ್ನು ಚದುರಿಸಲು ಹರಸಾಹಸ ಪಟ್ಟರು. ಶಾಸಕರು ಜೀಪಿನಿಂದ ಇಳಿಯಬೇಕು ಎಂದು ಜನರು ಪಟ್ಟು ಹಿಡಿದರು. ಕೊನೆಗೆ ಜೀಪಿನ ಮೇಲೆ ಕಲ್ಲು ತೂರಾಟ ನಡೆಸಿದರು. ಜೀಪು ಜಖಂಗೊಂಡಿತು.

ಉದ್ದೇಶಪೂರ್ವಕ ಹಲ್ಲೆ: ಘಟನೆಯ ಬಳಿಕ, ಅಂಗಿ ಹರಿದ ಸ್ಥಿತಿಯಲ್ಲೇ ವಿಡಿಯೊ ಸಂದೇಶವನ್ನು ಹರಿಬಿಟ್ಟ ಶಾಸಕ ಕುಮಾರಸ್ವಾಮಿ, ‘ಪ್ರತಿಭಟನಾ ಸ್ಥಳದಲ್ಲೇ ಇರಲು ನಾನು ಮುಂದಾಗಿದ್ದೆ. ಆದರೆ, ಪೊಲೀಸರು ದಾರಿ ತಪ್ಪಿಸಿ ಹೊರಕ್ಕೆ ಕಳಿಸಿದರು. ಇದು ಪೊಲೀಸರು ಮಾಡಿದ ತಪ್ಪು. ಉದ್ದೇಶ ಪೂರ್ವಕವಾಗಿ ನನ್ನ ಮೇಲೆ ಹಲ್ಲೆ ಮಾಡಿಸಲಾಗಿದೆ. ಇದರಲ್ಲಿ ಪೊಲೀಸರ ವೈಫಲ್ಯ ಇದೆ. ಸ್ಥಳದಲ್ಲಿ 10 ಮಂದಿ ಪೊಲೀಸರು ಮಾತ್ರ ಇದ್ದರು’ ಎಂದು ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.