ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಉಪಚುನಾವಣೆ ಬಳಿಕ ಇಬ್ಬರು ನಾಯಕರ ಮುಖಾಮುಖಿಯಾಗಿದ್ದು, ಜತೆಗೆ ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಜತೆಗಿದ್ದರು. ಇಬ್ಬರೂ ನಾಯಕರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಈ ಹಿಂದೆಯೂ ಕುಮಾರಸ್ವಾಮಿ, ತಮ್ಮ ಪಕ್ಷದ ಶಾಸಕರ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳಿಗಾಗಿ ಅನುದಾನ ಬಿಡುಗಡೆ ಮನವಿ ಮಾಡಿದ್ದರು. ಅದಕ್ಕೆ ಯಡಿಯೂರಪ್ಪ ಸ್ಪಂದಿಸಿ ಅನುದಾನ ಬಿಡುಗಡೆ ಮಾಡಿದ್ದರು.

ಜೆಡಿಎಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳ ಅಭಿವೃದ್ಧಿ ಹಾಗೂ ಅನುದಾನಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಮುಖ್ಯಮಂತ್ರಿ ಅವರನ್ನು ಕುಮಾರಸ್ವಾಮಿ ಭೇಟಿಯಾಗಿದ್ದರು. ಅದನ್ನು ಬಿಟ್ಟರೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಕುಮಾರಸ್ವಾಮಿ ಆಪ್ತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.