ಬೆಂಗಳೂರು: ಕುರುಬರಿಗೆ ಪರಿಶಿಷ್ಟ ಪಂಗಡ (ಎಸ್.ಟಿ) ಸ್ಥಾನಮಾನ ನೀಡುವಂತೆ ಆಗ್ರಹಿಸಿ ಕುರುಬರ ಎಸ್.ಟಿ ಹೋರಾಟ ಸಮಿತಿ ನಗರದ ಹೊರವಲಯದ ಮಾದಾವರದಲ್ಲಿ ಆಯೋಜಿಸಿರುವ ಪಾದಯಾತ್ರೆಯ ಸಮಾರೋಪಕ್ಕೆ ಜನಸಾಗರವೇ ಹರಿದುಬಂದಿದೆ.

ಲಕ್ಷಾಂತರ ಮಂದಿ ಸಮಾವೇಶದ ಸ್ಥಳ ತಲುಪಿದ್ದು, ನೂಕು ನುಗ್ಗಲಿನ ವಾತಾವರಣ ಸೃಷ್ಟಿಯಾಗಿದೆ. ಕುರ್ಚಿಗಳಿಗಾಗಿ ಕಿತ್ತಾಡಿಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಸಭಾಂಗಣದ ಆವರಣದಲ್ಲಿ ಹಾಕಿರುವ ತಡೆಗಳನ್ನು ತಳ್ಳಿಕೊಂಡು ಮುಂದಕ್ಕೆ ಬರಲು ಜನರು ಪ್ರಯತ್ನಿಸುತ್ತಿದ್ದಾರೆ.

ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸೇರಿದಂತೆ ಕುರುಬ ಸಮುದಾಯದ ಹಲವು ಮಠಾಧೀಶರು, ಸಚಿವರಾದ ಎಂ.ಟಿ.ಬಿ. ನಾಗರಾಜ್, ಆರ್. ಶಂಕರ್, ಕೆ.ಎಸ್.ಈಶ್ವರಪ್ಪ, ಶಾಸಕರಾದ ಬಂಡೆಪ್ಪ ಕಾಶೆಂಪುರ, ವಿಧಾನ ಪರಿಷತ್ ಸದಸ್ಯರಾದ ರಘುನಾಥ ರಾವ್ ಮಲ್ಕಾಪುರೆ, ಮಾಜಿ ಸಚಿವ ಎಚ್.ಎಂ.ರೇವಣ್ಣ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.