ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ ಮಾಡಿರುವ ಪ್ರಕರಣದ ಬಗ್ಗೆ ವಿಚಾರಣೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಅವರು ಬುಧವಾರ ರಾತ್ರಿ ಉಡುಪಿಗೆ ಬಂದಿದ್ದಾರೆ.

‘ವಿದ್ಯಾರ್ಥಿನಿಯ ಸಮಸ್ಯೆ ವಿಚಾರಣೆ ಮಾಡಲು ಬಂದಿದ್ದೇನೆ. ಗುರುವಾರ ಪೊಲೀಸ್ ಅಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಪಡೆದು, ಬಳಿಕ ಕಾಲೇಜಿನ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳನ್ನು ಭೇಟಿ ಮಾಡುತ್ತೇನೆ. ಪ್ರಕರಣದ ಸ್ವರೂಪವನ್ನು ಅರಿಯಬೇಕಾಗಿದ್ದು, ಎರಡು ದಿನ ಉಡುಪಿಯಲ್ಲಿದ್ದುಕೊಂಡು ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲರ ಜತೆ ಮಾತನಾಡುತ್ತೇನೆ’ ಎಂದು ಖುಷ್ಬು ಮಾಧ್ಯಮದವರಿಗೆ ತಿಳಿಸಿದರು.
ಇದಕ್ಕೂ ಮೊದಲು ಟ್ವೀಟ್ ಮಾಡಿದ್ದ ಅವರು, ‘ಇಂತಹ ಕೃತ್ಯಗಳಲ್ಲಿ ವಿದ್ಯಾರ್ಥಿನಿಯರು ಭಾಗವಹಿಸಿರುವುದು ನಿಜಕ್ಕೂ ವಿಷಾದನೀಯ. ಮಹಿಳೆಯರ ಘನತೆಗೆ ಚ್ಯುತಿ ತರುವ ಕೆಲಸವನ್ನು ಯಾರೂ ಮಾಡಬಾರದು’ ಎಂದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.