ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಸಂವಿಧಾನದ ಕಲಂ 217ನೇ ಅಡಿ ಲಭ್ಯವಿರುವ ಅಧಿಕಾರ ಬಳಸಿ ರಾಷ್ಟ್ರಪತಿ ಅನುಮೋದನೆ ಮೇರೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯ ಗುರುವಾರ ಆದೇಶ ಹೊರಡಿಸಿದೆ.

ಎಲ್.ನಾರಾಯಣಸ್ವಾಮಿ ಚಿತ್ರದುರ್ಗ ಜಿಲ್ಲೆಯವರು. 1959ರ ಜು.1ರಂದು ಜನಿಸಿದ ಅವರು, 1987ರಲ್ಲಿ ವಕೀಲ ವೃತ್ತಿ ಆರಂಭಿಸಿದರು. ಹೈಕೋರ್ಟ್ನಲ್ಲಿ ಭೂ ಕಂದಾಯ, ಸೇವಾ ವಿಷಯಗಳು ಸೇರಿ ಹಲವು ವಿಷಯಗಳಲ್ಲಿ ನೈಪುಣ್ಯತೆ ಹೊಂದಿದ್ದರು. 2007ರಲ್ಲಿ ಹೈಕೋರ್ಟ್ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2009ರಲ್ಲಿ ಅವರ ಸೇವೆ ಕಾಯಂ ಆಗಿತ್ತು. 2019ರ ಆರಂಭದಲ್ಲಿ ಐದು ತಿಂಗಳ ಕಾಲ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿಯೂ ಅವರು ಕೆಲಸ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.