ಬೆಂಗಳೂರು: ರಾಜ್ಯದಲ್ಲಿ ಕಾರ್ಮಿಕರ ಕನಿಷ್ಠ ವೇತನ ಪರಿಷ್ಕರಣೆ ಸಂಬಂಧ ವಿಸ್ತೃತವಾದ ಪ್ರಸ್ತಾವ ಸಲ್ಲಿಸುವಂತೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕನಿಷ್ಠ ವೇತನ ಪರಿಷ್ಕರಣೆ ಕುರಿತು ಸಚಿವರು, ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದರು. ವಿವಿಧ ಕ್ಷೇತ್ರಗಳಲ್ಲಿನ ಕಾರ್ಮಿಕರಿಗೆ ನಿಗದಿಪಡಿಸಿರುವ ಕನಿಷ್ಠ ವೇತನ ಮತ್ತು ಪರಿಷ್ಕರಣೆಯ ಪ್ರಕ್ರಿಯೆ ಕುರಿತು ಅಧಿಕಾರಿಗಳು ವಿವರ ನೀಡಿದರು. ಶೀಘ್ರವಾಗಿ ಪ್ರಸ್ತಾವ ಸಲ್ಲಿಸುವಂತೆ ಸಚಿವರು ಸೂಚನೆ ನೀಡಿದರು.

ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ ಮೊಹಮದ್ ಮೊಹಿಸಿನ್, ಆಯುಕ್ತ ಎಚ್.ಎನ್. ಗೋಪಾಲಕೃಷ್ಣ, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಭಾರತಿ, ಜಂಟಿ ಕಾರ್ಯದರ್ಶಿ ವೆಂಕಟರಾಜು ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.